ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 'ಎ' ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 170 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಜುಲೈ 18,2022 ರಿಂದ ಆಗಸ್ಟ್ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಲ್ಲಿಸಲು ಅರ್ಹರಾಗಿದ್ದರು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 7,2022ರಂದು ನಿಗದಿಪಡಿಸಲಾಗಿತ್ತು, ಪರೀಕ್ಷಾ ಫಲಿತಾಂಶವನ್ನು ಕೂಡ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ "Recruitment Of Assistant Manager In Grade A Online Phase I (Preliminary) Exam Result" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.


Click it and Unblock the Notifications











