NABARD Mains 2021 Result : ನಬಾರ್ಡ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಪ್ರಮುಖ ಪರೀಕ್ಷೆ ಫಲಿತಾಂಶ ಔಟ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ (ಗ್ರೇಡ್ ಎ & ಬಿ) ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶ ಮತ್ತು ಸಂದರ್ಶನ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ಫಲಿತಾಂಶ ಜೊತೆಗೆ ಸಂದರ್ಶನ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ನಬಾರ್ಡ್ ವ್ಯವಸ್ಥಾಪಕ ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಮತ್ತು ಸಂದರ್ಶನ ವೇಳಾಪಟ್ಟಿ ಪ್ರಕಟ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) 162 ಸಹಾಯಕ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ (ಗ್ರೇಡ್ ಎ & ಬಿ) ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಎಂಬಿಎ, ಪದವಿ, ಪಿಹೆಚ್‌.ಡಿ, ಸಿಎ/ಐಸಿಡಬ್ಲ್ಯೂಎ, ಸಿಎಸ್, ಬಿಬಿಎ, ಬಿಎಂಎಸ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಸೂಚಿಸಲಾಗಿತ್ತು. ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ ( ಗ್ರೇಡ್ ಎ & ಬಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 78,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 17,2021ರಂದು ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-ಎ ಹುದ್ದೆಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 18,2021ರಂದು ನಡೆಸಲಾಗಿದ್ದು, ಫಲಿತಾಂಶವನ್ನು ಈಗಾಗಲೇ ಪ್ರಕಟ ಮಾಡಲಾಗಿದೆ. ನಬಾರ್ಡ್ ಮುಖ್ಯ ಪರೀಕ್ಷೆಯನ್ನು ನವೆಂಬರ್ 16 ಮತ್ತು 17,2021ರಂದು ನಡೆಸಲಾಗಿದ್ದು, ಇದೀಗ ಪರೀಕ್ಷಾ ಫಲಿತಾಂಶ ಪ್ರಕಟವಾಗಿರುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸಂದರ್ಶನ ಸುತ್ತಿಗೆ ಅರ್ಹರಾಗಿದ್ದು, ಸಂದರ್ಶನ ಪ್ರಕ್ರಿಯೆಯು ಜನವರಿ ತಿಂಗಳ ಅಂತ್ಯದಲ್ಲಿ ಆನ್‌ಲೈನ್‌ ಮೂಲಕ ನಡೆಯಲಿದೆ. ಸಂದರ್ಶನ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ವೀಕ್ಷಿಸಬಹುದು.

ನಬಾರ್ಡ್ ಮುಖ್ಯ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಗ್ರೇಡ್ ಎ ಮತ್ತು ಗ್ರೇಡ್ ಬಿ ಹುದ್ದೆಗಳ ಸಂದರ್ಶನ ಕೇಂದ್ರ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಪಿಡಿಎಫ್ ಲಭ್ಯವಾಗುವುದು ವೀಕ್ಷಿಸಿ ಫಲಿತಾಂಶ ಪಡೆಯಿರಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
NABARD released main examination 2021 result and interview schedule for assistant manager and manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X