NABARD 2019: ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನಬಾರ್ಡ್‌ ಒಟ್ಟು 91 ಅಭಿವೃದ್ಧಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೊಬರ್ 2,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ನಬಾರ್ಡ್ ನೇಮಕಾತಿಯ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಈಗಾಗಲೇ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಇದೇ ನವೆಂಬರ್ 29ರಂದು ನಡೆಯುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.

ನಬಾರ್ಡ್ ನೇಮಕಾತಿಯ ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ Development Assistant ಹುದ್ದೆಗಳಿಗೆ ಸಂಬಂಧಪಟ್ಟಂತೆ "Link for downloading main examination admission letter and examination handouts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Download Call Letter" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NABARD 2019 released main examination admit card for development assistant posts in official website. Candidates who are eligible to attend mains they can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X