ನಬಾರ್ಡ್ ಗ್ರೇಡ್ 'ಎ' ಮತ್ತು ಗ್ರೇಡ್ 'ಬಿ' ಅಧಿಕಾರಿ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ನಬಾರ್ಡ್‌ ಗ್ರೇಡ್ 'ಎ' ಮತ್ತು ಗ್ರೇಡ್ 'ಬಿ' ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಒಟ್ಟು 79 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 'ಎ' ಮತ್ತು 8 ಮ್ಯಾನೇಜರ್ ಗ್ರೇಡ್ 'ಬಿ' ಹುದ್ದೆಗಳಿಗೆ ಮೇ 26,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ನಬಾರ್ಡ್ ನೇಮಕಾತಿಯ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಗ್ರೇಡ್ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜುಲೈ 27,2019ರೊಳಗೆ ಮತ್ತು ಗ್ರೇಡ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜುಲೈ 28,2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ "Recruitment Of Manager In Grade A & Grade B (RDBS)-2019-Online Phase II (Main) Exam Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಗ್ರೇಡ್ ಬಿ ಹುದ್ದೆಗಳಿಗೆ ಸಂಬಂಧಪಟ್ಟಂತೆ Recruitment of manager in grade B"Main Examination Call Letter" ಮೇಲೆ ಕ್ಲಿಕ್ ಮಾಡಿ ಮತ್ತು ಗ್ರೇಡ್ ಎ ಹುದ್ದೆಗಳಿಗೆ ಸಂಬಂಧಪಟ್ಟಂತೆ Recruitment of assistant manager in Grade A"Main Examination Call Letter" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
NABARD released phase II mains admit card for asst manager grade A and manager grade B posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X