ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) 162 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ನಬಾರ್ಡ್ ನೇಮಕಾತಿಯ ಮ್ಯಾನೇಜರ್ ಗ್ರೇಡ್-ಬಿ ಹುದ್ದೆಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 17,2021ರಂದು ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-ಎ ಹುದ್ದೆಗಳಿಗೆ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 18,2021ರಂದು ನಡೆಸಲು ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಗೆ ಹಾಜರಾಗಬೇಕಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ತದನಂತರ ಸ್ಕ್ರೀನ್ ಮೇಲೆ ಮೂಡುವ "CALL LETTER FOR PRELIMINARY EXAMINATION FOR ASSISTANT MANAGER GRADE 'A' AND MANAGER GRADE 'B'-2021" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Download Call Letter-Grade 'A' ಅಥವಾ Download Call Letter-Grade 'B' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.


Click it and Unblock the Notifications











