ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಅಭಿವೃದ್ಧಿ ಸಹಾಯಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 177 ಅಭಿವೃದ್ಧಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 10,2022ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಪದವಿ ವಿದ್ಯಾರ್ಹತೆಯುಳ್ಳ ಮತ್ತು ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ನವೆಂಬರ್ ೬ರಂದು ನಡೆಯುವ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ 29,2022 ರಿಂದ ನವೆಂಬರ್ 6,2022ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ನಬಾರ್ಡ್ ನೇಮಕಾತಿಯ ಡೆವಲಪ್ಮೆಂಟ್ ಅಸಿಸ್ಟೆಂಟ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ Development Assistant ಹುದ್ದೆಗಳಿಗೆ ಸಂಬಂಧಪಟ್ಟಂತೆ "Link for downloading preliminary examination admission letter and examination handouts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download Call Letter" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











