NABARD Main Exam 2021 Date : ನಬಾರ್ಡ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಮುಖ್ಯ ಪರೀಕ್ಷಾ ದಿನಾಂಕ ಪ್ರಕಟ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಮತ್ತು ವ್ಯವಸ್ಥಾಪಕ (ಗ್ರೂಪ್ ಎ ಮತ್ತು ಬಿ) ಹುದ್ದೆಗಳ ಮುಖ್ಯ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ನಬಾರ್ಡ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಪ್ರಮುಖ ಪರೀಕ್ಷಾ ದಿನಾಂಕ ಪ್ರಕಟ

ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ನಬಾರ್ಡ್ ನಲ್ಲಿ ಖಾಲಿ ಇರುವ 162 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 7,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುವುದು.

ನೇಮಕಾತಿ ಪ್ರಕ್ರಿಯೆಯನುಸಾರ ಸೆಪ್ಟೆಂಬರ್ 17 ಮತ್ತು 18,2021ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ನಬಾರ್ಡ್ ಮುಖ್ಯ ಪರೀಕ್ಷೆಯನ್ನು ನವೆಂಬರ್ 16 ಮತ್ತು 17,2021ರಂದು ನಿಗದಿಪಡಿಸಲಾಗಿದೆ. ಶೀಘ್ರದಲ್ಲಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ನಬಾರ್ಡ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
NABARD released main exam 2021 date for manager and assistant manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X