ರಾಷ್ಟ್ರೀಯ ವಿಜ್ಞಾನ ದಿನಾಚರಣೆ 2020....ಈ ವರ್ಷದ ಥೀಮ್ ?

ಸರ್ ಸಿ ವಿ ರಾಮನ್ ಅವರ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ. ಅವರು 1928ರ ಫೆಬ್ರವರಿ 28ರಂದು 'ರಾಮನ್ ಇಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ವಿಶ್ವಕ್ಕೆ ತಿಳಿಸಿದ್ದರು.

By Kavya

ಪ್ರತಿ ವರ್ಷ ಫೆಬ್ರವರಿ 28ನೇ ತಾರೀಖಿನಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ವಿಜ್ಞಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶವಾಗಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ..ಈ ವರ್ಷದ ಥೀಮ್ ಏನು?...

ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಅಪೂರ್ವ ಸಾಧನೆಯ ನೆನಪಿನಲ್ಲಿ ಈ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಗುರುತಿಸಲಾಗಿದೆ.ಅವರು 1928ರ ಫೆಬ್ರವರಿ 28ರಂದು 'ರಾಮನ್ ಇಫೆಕ್ಟ್' ಎಂದೇ ಪ್ರಸಿದ್ಧವಾದ ತಮ್ಮ ಅಧ್ಯಯನದ ವಿವರಗಳನ್ನು ಜಗತ್ತಿಗೆ ತಿಳಿಸಿದ್ದರು.

ಸಿ ವಿ ರಾಮನ್ ಪರಿಚಯ:

ಸಿ ವಿ ರಾಮನ್ ಪರಿಚಯ:

ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ ವಿ ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ ಎಂದು. ಅವರು ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ, 1888ರ ನವೆಂಬರ್ 7ರಂದು. ಅವರ ತಂದೆ ಚಂದ್ರಶೇಖರ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ಅಂದಿನ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಮುಗಿಸಿದ ರಾಮನ್, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉನ್ನತ ಸ್ಥಾನ ಗಳಿಸುವ ಮೂಲಕ ಕಲ್ಕತ್ತೆಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಜನರಲ್ ಆಗಿ ನೇಮಕಗೊಂಡರು.

ಸರಕಾರದಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಅವರಲ್ಲಿ ವಿಜ್ಞಾನದ ಕಡೆಗಿನ ತುಡಿತ ಹಾಗೆಯೇ ಉಳಿದಿತ್ತು. ಅದರ ಪರಿಣಾಮವಾಗಿ ಅವರು ತಮ್ಮ ಹುದ್ದೆಯನ್ನು ತ್ಯಜಿಸಿ ಕಲ್ಕತ್ತಾ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದರು, ಮುಂದೆ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಬೆಂಗಳೂರಿಗೆ ಬಂದವರು ತಮ್ಮ ಕೊನೆಯ ಉಸಿರಿನ ತನಕ ವಿವಿಧ ಸಂಶೋಧನೆಗಳಲ್ಲಿ ಮಗ್ನರಾಗಿದ್ದರು.

ರಾಮನ್ ಎಫೆಕ್ಟ್:
 

ರಾಮನ್ ಎಫೆಕ್ಟ್:

ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್‌ನಲ್ಲಿ ರಾಮನ್ ಅವರು ತಮ್ಮ ಸಹುದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.

ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು.

ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನಾವು ನೋಡಬಹುದು. ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ. ರಾಮನ್ ಪರಿಣಾಮವೆಂದು ಕರೆಯುವುದು ಇದನ್ನೇ.

ರಾಷ್ಟೀಯ ವಿಜ್ಞಾನ ದಿನ ಇತಿಹಾಸ:

ರಾಷ್ಟೀಯ ವಿಜ್ಞಾನ ದಿನ ಇತಿಹಾಸ:

1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಮ್ಯುನಿಕೇಷನ್ (ಎನ್ಸಿಎಸ್ಟಿಸಿ) ಭಾರತ ಸರ್ಕಾರಕ್ಕೆ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಲಿ ಆಚರಿಸಲು ಮನವಿಯನ್ನು ಸಲ್ಲಿಸಿತ್ತು, ಎನ್ಸಿಎಸ್ಟಿಸಿ ಯ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆ.28 ಅನ್ನು ರಾಷ್ಟೀಯ ದಿನವನ್ನಾಗಿ ದೇಶಾದ್ಯಂತ ಆಚರಿಸುವಂತೆ ಘೋಷಿಸಿತು. ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28, 1987 ರಂದು ಆಚರಿಸಲಾಗಿತ್ತು ತದನಂತರ ಈ ಆಚರಣೆ ಜಾರಿಯಲ್ಲಿದೆ.

ಹೇಗೆಲ್ಲಾ ಆಚರಿಸಲಾಗುತ್ತದೆ?:

ಹೇಗೆಲ್ಲಾ ಆಚರಿಸಲಾಗುತ್ತದೆ?:

ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ಶಾಲಾ ಕಾಲೇಜುಗಳು ಸೇರಿದಂತೆ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಈ ಮೂಲಕ ಜನತೆಗೆ ಸಿವಿ ರಾಮನ್ ರವರ ಬಗೆಗಿನ ಮಾಹಿತಿ ಮತ್ತು ವಿಜ್ಞಾನದ ಬಗೆಗಿನ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ.

2020ರ ಥೀಮ್:

2020ರ ಥೀಮ್:

ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ. ಈ ವರ್ಷ ಅಂದರೆ 2020ರ ಆಚರಣೆಯಲ್ಲಿ "ವಿಜ್ಞಾನದಲ್ಲಿ ಮಹಿಳೆ" ಎನ್ನುವ ಥೀಮ್ ಅನ್ನು ಒಳಗೊಂಡಿದೆ.

 

For Quick Alerts
ALLOW NOTIFICATIONS  
For Daily Alerts

English summary
National Science Day is celebrated all over India with great enthusiasm on 28th of February every year in order to commemorate the invention of the Raman Effect by the Indian physicist, Sir C V Raman
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X