ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) 6ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪ್ರವೇಶ ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಯ ಪ್ರವೇಶಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಭಾರಿ ಪ್ರವೇಶ ಪರೀಕ್ಷೆಯು ಏಪ್ರಿಲ್ 30 ರಂದು ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:30 ರವರೆಗೆ ಎರಡು ಗಂಟೆಗಳ ಕಾಲ ನಡೆಯಲಿದೆ. ಪರೀಕ್ಷೆಯು ಮೂರು ವಿಭಾಗಗಳನ್ನು ಹೊಂದಿದ್ದು, ಮಾನಸಿಕ ಸಾಮರ್ಥ್ಯ, ಅಂಕಗಣಿತ ಪರೀಕ್ಷೆ ಮತ್ತು ಭಾಷಾ ವಿಷಯಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಟ್ಟು 100 ಅಂಕಗಳಿಗೆ 80 ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಿಸಬೇಕಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಜೆಎನ್‌ವಿ 2022: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಧಿಕೃತ ವೆಬ್‌ಸೈಟ್ https://cbseitms.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಮತ್ತು ಅಭ್ಯರ್ಥಿಗಳ ರೋಲ್ ಸಂಖ್ಯೆಗಳು ಸೇರಿದಂತೆ ಇತರೆ ವಿವರಗಳನ್ನು ಒದಗಿಸಲಾಗಿರುತ್ತದೆ ಅದನ್ನು ವಿದ್ಯಾರ್ಥಿಗಳು ಪರಿಶೀಲಿಸಿಕೊಳ್ಳತಕ್ಕದ್ದು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅನುಮತಿ ಇರುವುದಿಲ್ಲ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.