ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ಎನ್‌ಸಿಇಆರ್‌ಟಿ ಪಠ್ಯ

ಈ ವರ್ಷದಿಂದಲೇ ಪ್ರಥಮ ಪಿ.ಯು ವಾಣಿಜ್ಯ ವಿಭಾಗಕ್ಕೆ ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಪರಿಷತ್‌ (ಎನ್‌ಸಿಇಆರ್‌ಟಿ) ಪಠ್ಯಪುಸ್ತಕಗಳು ಜಾರಿಗೆ ಬರಲಿವೆ.

ಈ ವರ್ಷದಿಂದಲೇ ಪ್ರಥಮ ಪಿ.ಯು ವಾಣಿಜ್ಯ ವಿಭಾಗಕ್ಕೆ ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಪರಿಷತ್‌ (ಎನ್‌ಸಿಇಆರ್‌ಟಿ) ಪಠ್ಯಪುಸ್ತಕಗಳು ಜಾರಿಗೆ ಬರಲಿವೆ.

ದ್ವಿತೀಯ ಪಿ.ಯು ವಾಣಿಜ್ಯ ವಿಷಯಗಳಿಗೆ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳನ್ನು ಅಳವಡಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಾಣಿಜ್ಯ ವಿಷಯಗಳಾದ ಅಕೌಂಟೆನ್ಸಿ, ಅರ್ಥಶಾಸ್ತ್ರ ಮತ್ತು ವಾಣಿಜ್ಯ ಶಾಸ್ತ್ರಗಳಿಗೆ ಇದು ಅನ್ವಯವಾಗಲಿದೆ.

2012-13 ಸಾಲಿನಿಂದ ಪ್ರಥಮ ಪಿಯುಸಿ ಮತ್ತು 2013-14 ರಿಂದ ದ್ವಿತೀಯ ಪಿಯುಸಿ ವಿಜ್ಙಾನ ವಿಷಯಗಳಿಗೆ ಎನ್ ಸಿ ಇ ಆರ್ ಟಿ ಪಠ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಅಳವಡಿಸಿಕೊಂಡಿತ್ತು. ಈಗ ಅದೇ ಮಾದರಿಯಲ್ಲಿ ವಾಣಿಜ್ಯ ವಿಷಯಗಳಿಗೂ ನೂತನ ಪಠ್ಯಕ್ರಮವನ್ನು ಅಳವಡಿಸಲು ಮುಂದಾಗಿದೆ.

ಎನ್‌ಸಿಇಆರ್‌ಟಿ ಪಠ್ಯ ಜಾರಿ

ಕನ್ನಡ ಮಾಧ್ಯಮದಲ್ಲೂ ಪುಸ್ತಕಗಳು ಲಭ್ಯ

ಎನ್‌ಸಿಇಆರ್‌ಟಿ ಪಠ್ಯವನ್ನು ಕನ್ನಡಕ್ಕೆ ಅನುವಾದ ಮಾಡಲಾಗಿದ್ದು ವಾಣಿಜ್ಯ ವಿಷಯಗಳ ಕನ್ನಡ ಪುಸ್ತಕಗಳು ಮುದ್ರಣ ಹಂತದಲ್ಲಿವೆ. ಈ ಪಠ್ಯಪುಸ್ತಕಗಳನ್ನು ವಿತರಕರ ಮೂಲಕ ವಿದ್ಯಾರ್ಥಿಗಳಿಗೆ ದೊರೆಯುವಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ.

ಪಠ್ಯಪುಸ್ತಕವನ್ನು ಡೌನ್ಲೋಡ್ ಮಾಡಬಹುದು

ನೂತನ ಪಠ್ಯಕ್ರಮದ ವಾಣಿಜ್ಯ ವಿಷಯಗಳ ಪಠ್ಯವನ್ನು ಇಲಾಖೆಯ ವೆಬ್‌ಸೈಟ್‌ನಲ್ಲೂ ಪ್ರಕಟಿಸಿ, ವಿದ್ಯಾರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಲು ಸೌಲಭ್ಯ ಕಲ್ಪಿಸಲಾಗುವುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ಈಗಾಗಲೇ ಪಿ.ಯು ವಿಜ್ಞಾನದ ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಹಾಗೂ ಜೀವ ವಿಜ್ಞಾನ ವಿಷಯಗಳಿಗೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗಿದೆ.

ಉಪನ್ಯಾಸಕರಿಗೆ ತರಬೇತಿ

ಪ್ರಥಮ ಪಿಯುಸಿಗೆ ನೂತನ ಪಠ್ಯಕ್ರಮ ಬೋಧಿಸಲು ಉಪನ್ಯಾಸಕರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶಿಖಾ ತಿಳಿಸಿದ್ದಾರೆ. ಮೇ 15 ರಿಂದ 30 ರವರೆಗೆ ತರಬೇತಿ ನಡೆಯಲಿದ್ದು ತರಬೇತಿಗೆ ಹಾಜರಾಗುವ ಉಪನ್ಯಾಸಕರಿಗೆ ದಿನಕ್ಕೆ 500 ರೂ. ಸಂಭಾವನೆ ಕೂಡ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಾಣಿಜ್ಯ ವಿಭಾಗಕ್ಕೆ ಎಲ್ಲೆಡೆ ಬಹುಬೇಡಿಕೆ ಇದ್ದು ವರ್ಷದಿಂದ ವರ್ಷಕ್ಕೆ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡುಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ವಾಣಿಜ್ಯ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಕೂಡ ಹೆಚ್ಚಿನದಾಗೇ ಇದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ಉದ್ಯೋಗಾವಕಾಶಗಳು ಕೂಡ ಸೃಷ್ಠಿಯಾಗಲಿವೆ.ಅಲ್ಲದೇ ಎನ್ ಸಿ ಇ ಆರ್ ಟಿ ಪಠ್ಯ ಪುಸ್ತಕಗಳನ್ನು ಅಳವಡಿಸುವುದರಿಂದ ವೃತ್ತಿ ಕೋರ್ಸ್ಗಳ ಪ್ರವೇಶ ಪರೀಕ್ಷೆಗೂ ಸಹಕಾರಿಯಾಗಲಿದೆ. ಎನ್ ಸಿ ಇ ಆರ್ ಟಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ನಾನಾ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಬಹದು.

For Quick Alerts
ALLOW NOTIFICATIONS  
For Daily Alerts

English summary
Karnataka PU board decided to bring ncert books for commerce class 11 from this academic year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X