ನೀಟ್-2017: ಏಕರೂಪ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆಗೆ ಚಾಲನೆ

ನೀಟ್‌ನಲ್ಲಿ ಮೆರಿಟ್ ಪಡೆದ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಪಡೆಯಬೇಕಿದ್ದರೆ ಜುಲೈ 5ರಿಂದ 9ರೊಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ kea.kar.nic.in ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ನೀಟ್-2017 ರ ಕೌನ್ಸಲಿಂಗ್ ಗೆ ಚಾಲನೆ ನೀಡಲಾಗಿದ್ದು, ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಏಕರೂಪದ ಕೇಂದ್ರೀಕೃತ ಕೌನ್ಸೆಲಿಂಗ್‌ ನಡೆಯಲಿದೆ. ಜುಲೈ 10ರಿಂದ ದಾಖಲಾತಿ ಪರಿಶೀಲನೆ ಆರಂಭ ಆಗಲಿದ್ದು ಅಭ್ಯರ್ಥಿಗಳಿಗೆ ನೋಂದಾಯಿಸಿಕೊಳ್ಳಲು ಐದು ದಿನಗಳ ಅವಕಾಶ ನೀಡಲಾಗಿದೆ.

ನೀಟ್‌ನಲ್ಲಿ ಮೆರಿಟ್ ಪಡೆದ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಪಡೆಯಬೇಕಿದ್ದರೆ ಜುಲೈ 5ರಿಂದ 9ರೊಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ kea.kar.nic.in ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ನೀಟ್-2017 ಕೌನ್ಸಲಿಂಗ್

ನೀಟ್ ಸೀಟು ಹಂಚಿಕೆ

ನೀಟ್ ಅಂಕಗಳ ಆಧಾರದ ಮೇಲೆ ಸೀಟು ಹಂಚಿಕೆ ನಡೆಯಲಿದೆ. ಕಳೆದ ಬಾರಿ ನೀಟ್ ಬಳಿಕ ಸೀಟು ಹಂಚಿಕೆಯನ್ನು ಖಾಸಗಿ ವೈದ್ಯಕೀಯ ಕಾಲೇಜುಗಳು ಪ್ರತ್ಯೇಕವಾಗಿ ನಡೆಸಿದ್ದವು, ಇದರಿಂದಾಗಿ ಅನೇಕ ವಿದ್ಯಾರ್ಥಿಗಳು ಸೀಟು ಪಡೆಯಲಾಗದೆ ವಂಚಿತರಾಗಿದ್ದರು.

ಈ ಬಾರಿ ಕೇಂದ್ರಿಕೃತ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಸರ್ಕಾರಿ, ಖಾಸಗಿ, ಅನಿವಾಸಿ ಭಾರತೀಯ ಸೀಟುಗಳನ್ನು ಸರ್ಕಾರಿ ನಿಗಾವಣೆಯಲ್ಲಿ ಕೆಇಎ ಮೂಲಕ ಪಾರದರ್ಶಕವಾಗಿ ಹಂಚಿಕೆ ಮಾಡಲಾಗುವುದು.

ನೀಟ್-2017 ರ ಪರೀಕ್ಷೆ

65 ಸಾವಿರ ವೈದ್ಯಕೀಯ ಮತ್ತು 25 ಸಾವಿರ ದಂತ ವೈದ್ಯಕೀಯ ಸೀಟುಗಳಿಗೆ ದೇಶದ 103 ನಗರಗಳಲ್ಲಿ 2,200 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆದಿದ್ದು, ಒಟ್ಟು 11,35,104 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ 1,522 ಅನಿವಾಸಿ ಭಾರತೀಯ ಹಾಗೂ 613 ವಿದೇಶಿ ವಿದ್ಯಾರ್ಥಿಗಳು ಸೇರಿದ್ದಾರೆ.

ರಾಜ್ಯದಲ್ಲಿ ನೀಟ್ ಪರೀಕ್ಷೆ ರಾಜ್ಯದ 8 ಜಿಲ್ಲೆಯ 156 ಕೇಂದ್ರಗಳಲ್ಲಿ 77,393 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಬೆಂಗಳೂರು, ಬೆಳಗಾವಿ, ಗುಲ್ಬರ್ಗ, ಮಂಗಳೂರು, ಹುಬ್ಬಳ್ಳಿ, ಮೈಸೂರು, ದಾವಣಗೆರೆ ಮತ್ತು ಉಡುಪಿ ಕೇಂದ್ರಗಳಲ್ಲಿ ಪರೀಕ್ಷೆಯು ನಡೆದಿತ್ತು.

ಮೇ 7ರಂದು ನಡೆದಿದ್ದ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡಲಾಗಿತ್ತು. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ, ಬೆಂಗಾಲಿ, ಅಸ್ಸಾಮಿ, ಗುಜರಾತಿ ಮತ್ತು ಒಡಿಯಾ ಸೇರಿ ಹತ್ತು ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು.

2013ರಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆ ನಡೆಸಲಾಗಿತ್ತು. ಇದಾದ ನಂತರ ನಿಂತಿದ್ದ ಪರೀಕ್ಷೆಯನ್ನು 2016ರಲ್ಲಿ ಮತ್ತೆ ಪುನರಾರಂಭಿಸಲಾಗಿತ್ತು. 2016ರಲ್ಲಿ ಎರಡು ಹಂತದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಆದರೆ ಈ ಬಾರಿ ಒಂದೇ ಹಂತದಲ್ಲಿ ಪರೀಕ್ಷೆ ನಡೆಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
combined centralised counseling for admission to MBBS and BDS courses for the year 2017-18 in the state of Karnataka
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X