ನೀಟ್ 2017: 25 ವರ್ಷ ಮೇಲ್ಪಟ್ಟವರು ಪರೀಕ್ಷೆ ಬರೆಯಬಹುದು

25 ವರ್ಷಕ್ಕಿಂತ ಮೇಲ್ಪಟ್ಟವರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆಯಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 05 ರವರೆಗೂ ಅವಕಾಶ ಕಲ್ಪಿಸಿದೆ.

ವಯಸ್ಸಿನ ಸಡಿಲಿಕೆ ನೀಡಿರುವ ಸುಪ್ರೀಂಕೋರ್ಟ್ 25 ವರ್ಷ ಮೇಲ್ಪಟ್ಟವರು 2017ರಲ್ಲಿ ನೀಟ್ ಪರೀಕ್ಷೆ ಬರೆಯಬಹುದು ಎಂದು ಹೇಳಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ವರ್ಷದಿಂದ ವಯೋಮಿತಿ ನಿಗದಿಪಡಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

ನೀಟ್ ಬರೆಯುವ ಅಭ್ಯರ್ಥಿಗಳಿಗೆ ಸಿಬಿಎಸ್​ಇಯು 25 ವರ್ಷ ನಿಗದಿಪಡಿಸಿತ್ತು. ನೀಟ್ ಪರೀಕ್ಷೆ ಬರೆಯಲು ಗರಿಷ್ಠ 25 ವರ್ಷ ಮಿತಿ ಹೇರಿರುವುದಕ್ಕೆ ಸ್ಪಷ್ಟನೆ ನೀಡಬೇಕೆಂದು ಹೈಕೋರ್ಟ್ ಫೆಬ್ರವರಿ 15ರಂದು ಭಾರತೀಯ ವೈದ್ಯಕೀಯ ಮಂಡಳಿ, ಸಿಬಿಎಸ್ಇ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ನೀಟ್ ವಯಸ್ಸಿನ ಸಡಿಲಿಕೆ

ಈ ಮಧ್ಯೆ, ಅಲಹಾಬಾದ್ ಹೈಕೋರ್ಟ್ ನ ಇಬ್ಬರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಸಲ್ಲಿಸಿದ್ದ ಅಫಿಡವಿಟ್ಟಿನ ವಿಚಾರಣೆ ನಡೆಸಿತು. ವಿಚಾರಣೆಯನ್ನು ಪರಿಶೀಲಿಸಿದ ನಂತರ ಹಲವು ಪದವಿ ಕೋರ್ಸ್ ಗಳ ಪ್ರವೇಶಕ್ಕೆ 25 ವರ್ಷಕ್ಕಿಂತ ಮೇಲ್ಪಟ್ಟವರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆಯಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ವಯಸ್ಸಿನ ಸಡಿಲಿಕೆ ನೀಡುವುದರ ಜೊತೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ಸುಪ್ರೀಂ ಕೋರ್ಟ್ ಮುಂದೂಡಿದೆ. ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಏಪ್ರಿಲ್ 5 ರ ವರೆಗೆ ವಿಸ್ತರಿಸಿದೆ.

ನೀಟ್ 2017

ಭಾರತೀಯ ವೈದ್ಯಕೀಯ ಪರಿಷತ್ (ಎಂ.ಸಿ.ಐ) ಮತ್ತು ಭಾರತೀಯ ದಂತ ವೈದ್ಯಕೀಯ ಪರಿಷತ್ (ಡಿ.ಸಿ.ಐ) ಅನುಮೋದನೆಯೊಂದಿಗೆ ನಡೆಯುತ್ತಿರುವ ದೇಶದ ಎಲ್ಲಾ ಸರ್ಕಾರಿ, ಖಾಸಗಿ, ಡೀಮ್ಡ್ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳ ಪ್ರವೇಶ ಮೇ 07 ರಂದು ಏಕಕಾಲಕ್ಕೆ ದೇಶಾದ್ಯಂತ 104 ನಗರಗಳ 2200 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ನಡೆಯಲಿದೆ. ಒಟ್ಟು 11,35,104 ವಿದ್ಯಾರ್ಥಿಗಳು ಬರೆಯಲಿದ್ದಾರೆ.

ಪರೀಕ್ಷಾ ವಿವರ

  • ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕನ್ನಡ, ಇಂಗ್ಲಿಷ್, ತಮಿಳು, ತೆಲುಗು ಸೇರಿದಂತೆ ದೇಶದ ಒಟ್ಟು 10 ಭಾಷೆಗಳಲ್ಲಿ ನೀಡಲಾಗುತ್ತದೆ.
  • ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು 3 ಬಾರಿ ಅವಕಾಶ ನೀಡಲಾಗಿದ್ದು ಈಗಾಗಲೇ 3 ಬಾರಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
  • ದಿನಾಂಕ 07-05-2017 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪತ್ರಿಕೆಯು ಒಟ್ಟು 180 ಪ್ರಶ್ನೆಗಳನ್ನು ಒಳಗೊಂಡಿರುತ್ತವೆ.
  • ಪರೀಕ್ಷಾ ವಿಷಯಗಳು ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ (ಬಾಟನಿ ಮತ್ತು ಜಿಯೋಲಾಜಿ) ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳನ್ನ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ಕನ್ನಡಲ್ಲಿ ಪ್ರಶ್ನೆ ಪತ್ರಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು

  • ಪರೀಕ್ಷಾ ಕರೆ ಪತ್ರವನ್ನು ವೆಬ್ಸೈಟ್ಗೆ ಅಪ್ಲೋಡ್ ಮಾಡುವ ದಿನಾಂಕ 15-04-2017
  • ಪರೀಕ್ಷೆ ನಡೆಯುವ ದಿನಾಂಕ 07-05-2017
  • ಫಲಿತಾಂಶ ಪ್ರಕಟಗೊಳ್ಳುವ ದಿನಾಂಕ 08-06-2017

ಹೆಚ್ಚಿನ ಮಾಹಿತಿಗಾಗಿ ಸಿಬಿಎಸ್ಇ ವೆಬ್ಸೈಟ್ ವಿಳಾಸ ಗಮನಿಸಿ cbseneet.nic.in

For Quick Alerts
ALLOW NOTIFICATIONS  
For Daily Alerts

English summary
Supreme Court today, March 31, has allowed candidates above 25 years to appear for NEET examination.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X