ರೈಲು ತಡವಾಗಿ ಬಂದ ಕಾರಣ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಿಸ್ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮುಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆಯನ್ನು ನಡೆಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು.

ಇದೀಗ "ಅವಕಾಶ ವಂಚಿತರಾದ ವಿದ್ಯಾರ್ಥಿಗಳಿಗಾಗಿ ಸಿಹಿ ಸುದ್ದಿ" ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆಯನ್ನು ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಯನ್ನು ಬರೆಯಬಹುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಭಾನುವಾರದಂದು ಹಂಪಿ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿಗೆ 7 ಗಂಟೆ ತಡವಾಗಿ ಬಂದ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಮಿಸ್ ಮಾಡಿಕೊಂಡ ಕರ್ನಾಟಕದ ಒಟ್ಟು 365 ವಿದ್ಯಾರ್ಥಿಗಳು ಇದೇ ಮೇ 20 ಭಾನುವಾರದಂದು ನಡೆಯುವ ನೀಟ್ ಮರುಪರೀಕ್ಷೆಯಲ್ಲಿ ಹಾಜರಾಗಬಹುದು.
ರೈಲು ವಿಳಂಬದಿಂದಾಗಿ ಅವಕಾಶ ವಂಚಿತರಾದ ವಿದ್ಯಾರ್ಥಿಗಳು ಮೇ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ನಡೆಯುವ ನೀಟ್ ಮರು ಪರೀಕ್ಷೆಯನ್ನು ಬರೆಯಬಹುದು ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್‌ಟಿಎ) ಸ್ಪಷ್ಟಪಡಿಸಿರುತ್ತದೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಪರೀಕ್ಷೆಯು ಮೇ೫ ರಂದು ಇತ್ತು. ರೈಲು ವಿಳಂಬದಿಂದಾಗಿ ರಾಜ್ಯದ ಉತ್ತರ ಕರ್ನಾಟಕ ಭಾಗದ 300 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ.
ಅಲ್ಲದೇ ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದ ಉಂಟಾದ ಗೊಂದಲದಿಂದಾಗಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ.
ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವ ಕುರಿತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಪ್ರಕಟಣೆ ಸ್ಪಷ್ಟಪಡಿಸಿಲ್ಲ.


Click it and Unblock the Notifications











