ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು(ಎನ್‌ಟಿಎ) ಸೆಪ್ಟೆಂಬರ್ 13,2020ರಂದು ನೀಟ್ ಪರೀಕ್ಷಾ ದಿನಾಂಕವನ್ನು ಈಗಾಗಲೇ ನಿಗದಿ ಮಾಡಿದ್ದು, ಇದೀಗ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಅರ್ಹತಾ ಪ್ರವೇಶಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪರೀಕ್ಷೆ ಕೇಂದ್ರಗಳನ್ನು ಚೆಕ್ ಮಾಡಿಕೊಳ್ಳಬಹುದು. ಪರೀಕ್ಷಾ ಪ್ರವೇಶ ಪತ್ರವನ್ನು ಎನ್‌ಟಿಎ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಎನ್‌ಟಿಎ ಕಳೆದವಾರ ಬಿಡುಗಡೆ ಮಾಡಿದ ಪ್ರಕಟಣೆಯೊಂದರಲ್ಲಿ, ನೀಟ್ ಪರೀಕ್ಷಾ ಕೇಂದ್ರಗಳು, ನಗರ, ಸ್ಥಳಗಳ ಕುರಿತು ಮುಂಚೆಯೇ ವೆಬ್‌ಸೈಟ್‌ನಲ್ಲಿ ಅಪ್‌ಡೇಟ್ ಮಾಡಲಾಗುವುದು ಎಂದು ತಿಳಿಸಿತ್ತು. ಅದರ ಅನ್ವಯ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪಡೆಯಬಹುದು. ಇದರ ಜೊತೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.
For Daily Alerts