ಕೊರೊನಾವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಎಲ್ಲೆಡೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ಈ ಬಾರಿಯ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ ಎಂದು ವಿರೋಧಿಸುತ್ತಿದ್ದಾರೆ.
ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಕುರಿತು ದೇಶದ ಹಲವು ವಿಶ್ವವಿದ್ಯಾಲಯಗಳ 150ಕ್ಕೂ ಹೆಚ್ಚು ಅಕಾಡೆಮಿಗಳು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದು ಮನವಿ ಸಲ್ಲಿಸಿದ್ದಾರೆ.
For Daily Alerts