
ದೇಶದಲ್ಲಿ ಕೋರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ.18ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ದಿನೇ ದಿನೇ ಹೆಚ್ಚಳವಾಗುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಏಕೆ ಮುಂದೂಡಲಾಗುತ್ತಿಲ್ಲ ಎನ್ನುವ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.
ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 18,2021ರಂದು ನಡೆಯಬೇಕಿರುವ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಪರಿಸ್ಥಿತಿಯನ್ನು ನೋಡಿಕೊಂಡು ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
For Quick Alerts
For Daily Alerts
English summary
NEET PG exam 2021 postponed due to covid 19 which scheduled on April 18.
Story first published: Thursday, April 15, 2021, 21:19 [IST]


Click it and Unblock the Notifications











