ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್‌ಬಿಇ) ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್ ಟೆಸ್ಟ್ (NEET) ಸೂಪರ್ ಸ್ಪೆಷಾಲಿಟಿ (SS) ಪರೀಕ್ಷೆ 2020ಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಡಿಎಂ, ಎಂಸಿಹೆಚ್, ಮತ್ತು ಡಿಎನ್‌ಬಿ ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಯಸುವ ಅಭ್ಯರ್ಥಿಗಳು NEET SS 2020 ಪರೀಕ್ಷೆಯನ್ನು ತೆಗೆದುಕೊಳ್ಳಬೇಕಿರುತ್ತದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
NEET SS 2020 ಪರೀಕ್ಷೆ ಫಲಿತಾಂಶ ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ಅಧಿಕೃತ ವೆಬ್‌ಸೈಟ್ https://nbe.edu.in/ ಗೆ ಭೇಟಿ ನೀಡಿರ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ 'NEET SS 2020 Results' ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಲಭ್ಯವಾಗುವ ಫಲಿತಾಂಶವನ್ನು ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಗಳು ಮುಂದಿನ ರೆಫರೆನ್ಸ್‌ಗಾಗಿ ಫಲಿತಾಂಶದ ಪ್ರಿಂಟೌಟ್ ತೆಗೆದುಕೊಳ್ಳಿ.


Click it and Unblock the Notifications











