NEET UG Result 2022 : ನೀಟ್ ಯುಜಿ ಫಲಿತಾಂಶ ವೀಕ್ಷಿಸುವುದು ಹೇಗೆ ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಯುಜಿ ಅಥವಾ NEET-UG 2022ರ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ನೀಟ್ ಯುಜಿ 2022ರ ಫಲಿತಾಂಶ ಪ್ರಕಟ

NTA ಈಗಾಗಲೇ ಆಗಸ್ಟ್ 31 ರಂದು NEET ಉತ್ತರದ ಕೀಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸೆಪ್ಟೆಂಬರ್ 2 ರವರೆಗೆ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. NEET ಯುಜಿ ಪೇಪರ್ - ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ವಿಷಯವು ಎರಡು ವಿಭಾಗಗಳನ್ನು ಒಳಗೊಂಡಿದ್ದು, ವಿಭಾಗ A 35 ಪ್ರಶ್ನೆಗಳನ್ನು ಮತ್ತು ವಿಭಾಗ B 15. ವಿಭಾಗ B ಯಲ್ಲಿನ 15 ಪ್ರಶ್ನೆಗಳಲ್ಲಿ ಅಭ್ಯರ್ಥಿಗಳು ಯಾವುದೇ 10 ಪ್ರಶ್ನೆಗಳನ್ನು ಉತ್ತರಿಸಲು ಅವಕಾಶ ನೀಡಲಾಗಿತ್ತು.

NEET ಯುಜಿ 2022 ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ 'NEET ಯುಜಿ 2022 ಫಲಿತಾಂಶ' ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3 : ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4 : ಫಲಿತಾಂಶವು ಪರದೆಯ ಮೇಲೆ ಮೂಡುತ್ತದೆ
ಸ್ಟೆಪ್ 5 : ಫಲಿತಾಂಶ ವೀಕ್ಷಿಸಿದ ಬಳಿಕ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

NEET UG 2022 ಫಲಿತಾಂಶದ ಜೊತೆಗೆ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಯಶಸ್ವಿ ಅಭ್ಯರ್ಥಿಗಳ NEET ಶ್ರೇಣಿಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜುಲೈ 17 ರಂದು ನಡೆದ NEET UG 2022ಗೆ 18 ಲಕ್ಷಕ್ಕೂ ಹೆಚ್ಚು (18,72,343) ಅಭ್ಯರ್ಥಿಗಳು ಹಾಜರಾಗಿದ್ದರು, ಮರು ಪರೀಕ್ಷೆಯು ಸೆಪ್ಟೆಂಬರ್ 4 ರಂದು ನಡೆಯಿತು.

ಸಾಮಾನ್ಯ ವರ್ಗದ ಅಭ್ಯರ್ಥಿಗಳು NEET 2022 ಗೆ ಅರ್ಹತೆ ಪಡೆಯಲು ಶೇಕಡಾ 50 ಅಂಕಗಳನ್ನು ಗಳಿಸಬೇಕು. ಆದರೆ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ಜಾತಿ (OBC) ವರ್ಗದ ಅಭ್ಯರ್ಥಿಗಳು ಶೇಕಡಾ 40 ಅನ್ನು ಗಳಿಸಬೇಕು.

More News  

For Quick Alerts
ALLOW NOTIFICATIONS  
For Daily Alerts

English summary
NEET UG 2022 result released. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+