NEET UG Admit Card 2021: ನೀಟ್ ಯುಜಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ನ್ಯಾಷನಲ್ ಟೆಟ್ಸಿಂಗ್ ಏಜೆನ್ಸಿಯು 2021ರ ನೀಟ್ ಯುಜಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನೀಟ್ ಯುಜಿ ಪ್ರವೇಶ ಪತ್ರ ಪ್ರಕಟ

ನೀಟ್ ಯುಜಿ ಪರೀಕ್ಷೆಯನ್ನು ಸೆಪ್ಟೆಂಬರ್ 12,2021ರಂದು ಮಧ್ಯಾಹ್ನ 2 ರಿಂದ ಸಂಜೆ 5:30ರ ವರೆಗೆ ನಿಗದಿಪಡಿಸಲಾಗಿದೆ. ನೀಟ್ ಯುಜಿ 2021 ಪರೀಕ್ಷೆಯು 180 ಬಹು ಆಯ್ಕೆ ಪ್ರಶ್ನೆಗಳನ್ನು ಹೊಂದಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪಡೆಯಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನೀಟ್ ಯುಜಿ 2021 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://neet.nta.nic.in/ ಗೆ ಭೇಟಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೀಟ್ ಯುಜಿ 2021 ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಿದ್ದು, ಫೇಸ್‌ ಮಾಸ್ಕ್, ಹ್ಯಾಂಡ್‌ಸ್ಯಾನಿಟೈಸರ್ ಮತ್ತು ಫೇಸ್‌ಶೀಲ್ಡ್‌ ಬಳಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
National testing agency (NTA) released NEET UG examination admit card 2021. Here are the steps to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X