NEP 2020 : ಪದವಿ ಶಿಕ್ಷಣದಲ್ಲಿ ಮೊದಲೆರಡು ವರ್ಷ ಕನ್ನಡ ಕಡ್ಡಾಯ

ರಾಷ್ಟ್ರೀಯ ಶಿಕ್ಷಣ ನೀತಿ -2020 (NEP-2020) ಅಡಿಯಲ್ಲಿ ಪದವಿ ಕೋರ್ಸ್ ಅಧ್ಯಯನದಲ್ಲಿ ಮೊದಲ ಎರಡು ವರ್ಷಗಳಲ್ಲಿ ಕಲಿಯಬೇಕಾದ ಎರಡು ಭಾಷೆಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲಾಗಿದೆ. ಕನ್ನಡೇತರ ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಫಂಕ್ಷನಲ್ ಕನ್ನಡವನ್ನು ಅಧ್ಯಯನ ಮಾಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯಯ ಹೊರಡಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹೊಸ ಶಿಕ್ಷಣ ನೀತಿ : ಪದವಿ ಕೋರ್ಸ್ ಮೊದಲೆರಡು ವರ್ಷಗಳು ಕನ್ನಡ ಕಡ್ಡಾಯ

ವಿದ್ಯಾರ್ಥಿಗಳು ಪದವಿ ಅಧ್ಯಯನದ ಮೊದಲ ಎರಡು ವರ್ಷಗಳಲ್ಲಿ ಎರಡು ಭಾಷೆಗಳನ್ನು ಕಲಿಯಬೇಕಿದ್ದು, ನಾಲ್ಕು ಸೆಮಿಸ್ಟರ್ ಗಳಿಗೂ ಕನ್ನಡವನ್ನು ಕಡ್ಡಾಯವಾಗಿ ಅಧ್ಯಯನ ಮಾಡಬೇಕು ಎಂದು ಉನ್ನತ ಶಿಕ್ಷಣದ ಆಯುಕ್ತ ಪ್ರದೀಪ್ ಪಿ ಹೇಳಿದ್ದಾರೆ. ಕನ್ನಡಿಗರಲ್ಲದ ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ/ಫಂಕ್ಷನಲ್ ಕನ್ನಡವು ಭಾಷೆಯಲ್ಲಿ ಸಂವಹನ ನಡೆಸಲು ಮೂಲಭೂತ ಸಂವಹನ ಕೌಶಲ್ಯಗಳನ್ನು ನೀಡುವುದರ ಜೊತೆಗೆ ಅಕ್ಷರಗಳ ಮೂಲ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯು (ವಿಟಿಯು) ಈ ಮಾದರಿಯನ್ನು ಅನುಸರಿಸುತ್ತಿದ್ದು, ಅಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್‌ನ ಕನ್ನಡೇತರ ವಿದ್ಯಾರ್ಥಿಗಳಿಗೆ ಅಥವಾ ಕನ್ನಡವೇ ಗೊತ್ತಿಲ್ಲದ ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ಕನ್ನಡದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರವೇಶ ಪ್ರಕ್ರಿಯೆಯ ಬಗ್ಗೆ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸುವುದೇನೆಂದರೆ ಈ ವರ್ಷ ಏಕೀಕೃತ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮಾದರಿಯಲ್ಲಿ ಪ್ರವೇಶ ಮಾಡ್ಯೂಲ್ ಅನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ತಾವು ಆಯ್ದ ಕಾಲೇಜುಗಳಿಂದ ಎರಡು ಮುಖ್ಯ ವಿಷಯಗಳು ಹಾಗೂ ಒಂದು ಎಲೆಕ್ಟಿವ್ ವಿಷಯದ ಬಗ್ಗೆ ಆಫ್‌ಲೈನ್ ನಲ್ಲಿ ಮಾರ್ಗದರ್ಶನವನ್ನು ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವರ್ಷಾಂತ್ಯದ ವೇಳೆಗೆ 'ಸ್ಮಾರ್ಟ್' ಕ್ಲಾಸ್ ಆಗಲಿವೆ :

ಡಿಜಿಟಲ್ ವಿಭಜನೆಯನ್ನು ನಿವಾರಿಸುವ ಪ್ರಯತ್ನದಲ್ಲಿ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ಈ ವರ್ಷಾಂತ್ಯದ ವೇಳೆಗೆ 100 ಪ್ರತಿಶತ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಸ್ಥಾಪಿಸಲು ಯೋಜನೆ ನಡೆಸಿದೆ. ಈಗಾಗಲೇ 9,000 ಕ್ಲಾಸ್ ರೂಂಗಳಲ್ಲಿ 2,500 ಅನ್ನು ಹೈಟೆಕ್ ಮಾಡಲಾಗಿದೆ. ಇಲಾಖೆಯು ಧನಸಹಾಯಕ್ಕಾಗಿ ಸರ್ಕಾರದೊಂದಿಗೆ ಮಾತನಾಡುತ್ತಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪಿ ಹೇಳಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಗ್ಯಾಜೆಟ್‌ಗಳನ್ನು ಒದಗಿಸಲಾಗುತ್ತಿದೆ ಮತ್ತು ಇಂಟರ್‌ನೆಟ್‌ ಸೌಲಭ್ಯಗಳನ್ನು ಒದಗಿಸಲು ಸಂಸ್ಥೆಗಳನ್ನು ಕೇಳಲಾಗಿದೆ ಎಂದು ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Kannada language has been made compulsory as one of the two languages in the first two years of degree courses under the NEP 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X