ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ

ಕೊರೋನಾ ಸಮಸ್ಯೆಯಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ವರ್ಷದಲ್ಲಿ 100 ದಿನಗಳು ಮಾತ್ರ ಶಾಲೆ ?

 

ಈ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕೇಂದ್ರ ಸಂಪನ್ಮೂಲ ಇಲಾಖೆಯು 220 ದಿನಗಳ ಕಲಿಕೆಯನ್ನು ವಿಂಗಡಿಸಿದೆ.

ವರ್ಕ್ ಫ್ರಂ ಆನ್‌ಲೈನ್ ಎನ್ನುವ ರೀತಿಯಲ್ಲಿ 100 ದಿನಗಳ ಕಾಲ ಮಕ್ಕಳು ಮನೆಯಲ್ಲೇ ಕುಳಿತು ಆನ್‌ಲೈನ್ ಮತ್ತು ಶಾಲೆಯ ಇತರೆ ತಂತ್ರಜ್ಞಾನ ಬಳಸಿ ಶಿಕ್ಷಣ ಪಡೆಯಬಹುದಾಗಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಸರ್ಕಾರಿ ಟಿವಿ ಚಾನೆಲ್ ಗಳ ಮೂಲಕ ಶಿಕ್ಷಣ ನೀಡುವ ಸಾಧ್ಯತೆ ಇದೆ. ಬಾಕಿ ಉಳಿದ 100 ದಿನಗಳು ಮಾತ್ರ ಶಾಲೆಯಲ್ಲಿ ತರಗತಿ ಹಾಜರಾಗಬೇಕು. ಉಳಿದ 20 ದಿನಗಳಲ್ಲಿ ಆರೋಗ್ಯ ತಪಾಸಣೆ ಹಾಗೂ ಮತ್ತಿತರ ಪಠ್ಯೇತರ ಚಟುವಟಿಕೆಗಳಿಗೆ ಮೀಸಲಿಡಲು ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಎಂಹೆಚ್ಆರ್ಡಿ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯಲಿದೆ. ನಂತರವೇ ಅಧಿಕೃತ ಮಾಹಿತಿಗಳು ಹೊರಬೀಳಲಿದೆ.

For Quick Alerts
ALLOW NOTIFICATIONS  
For Daily Alerts

English summary
Central Government Planing to do 100 days classes in a academic year due to Corona virus effect.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X