New National Education Policy 2020: 5ನೇ ತರಗತಿ ವರೆಗೂ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಕೆ

New National Education Policy 2020: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (HRD) ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾಯಿಸಲಾಗಿದೆ ಮತ್ತು ಸಭೆಯಲ್ಲಿ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನೂತನ ಶಿಕ್ಷಣ ನೀತಿಗೂ ಕೂಡ ಅನುಮೋದನೆ ನೀಡಿದೆ.

ನೂತನ ಶಿಕ್ಷಣ ನೀತಿಗೆ ಕ್ಯಾಬಿನೆಟ್ ಅನುಮೋದನೆ

ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು. ಈ ಸಭೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕೆಲ ದಿನಗಳ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದು, ಸಚಿವಾಲಯದ ಈಗಿರುವ ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾಯಿಸಲು ಮನವಿ ಮಾಡಿತ್ತು. ಇನ್ನೊಂದೆಡೆಗೆ ನೂತನ ಶಿಕ್ಷಣ ನೀತಿಗೆ ಅನುಮೋದನೆ ಸಿಕ್ಕ ಬಳಿಕ ಇದೀಗ ಇಡೀ ಉನ್ನತ ಶಿಕ್ಷಣ ಕ್ಷೇತ್ರಕ್ಕಾಗಿ ಒಂದೇ ನಿಯಂತ್ರಕ ಮಂಡಳಿ ಇರಲಿ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿನ ಅವ್ಯವವಸ್ಥೆ ತೊಡೆದುಹಾಕುವಲ್ಲಿ ನೆರವು ಸಿಗಲಿದೆ ಎನ್ನಲಾಗಿದೆ.

ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್, "ಭಾರತದ ನೂತನ ಶಿಕ್ಷಣ ನೀತಿ ಜಾರಿಗೆ ಬರುತ್ತಿದ್ದು, ಹಲವು ಸಂಗತಿಗಳನ್ನು ಅದು ಒಳಗೊಂಡಿರಲಿದೆ. ನೂತನ ಶಿಕ್ಷಣ ನೀತಿಯ ಅಡಿಯಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಕುರಿತು ಹೇಳಲಾಗಿದೆ. ಅಷ್ಟೇ ಅಲ್ಲ ಯುವಕರು ಉನ್ನತ ಶಿಕ್ಷಣ ಪಡೆಯುವುದು ಈ ಮೊದಲಿಗಿಂತಲೂ ಸುಲಭವಾಗಲಿದೆ" ಎಂದು ಹೇಳಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನಿದೆ ?:

* 5ನೇ ತರಗತಿಯ ವರೆಗೂ ಮಕ್ಕಳಿಗೆ ಮಾತೃ ಭಾಷೆ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಬೇಕು.
* ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕ ರೂಪ (ಸಾಮಾನ್ಯ) ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.
* ದೇಶದ ಟಾಪ್ 100 ವಿಶ್ವವಿದ್ಯಾಲಯಗಳಲ್ಲಿ ಸಂಪೂರ್ಣ ಆನ್‌ಲೈನ್ ಶಿಕ್ಷಣ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದೆ.

For Quick Alerts
ALLOW NOTIFICATIONS  
For Daily Alerts

English summary
New education policy 2020 get cabinet approval and hrd ministry renamed as education ministry.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X