ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (NIFT) 2020-21ನೇ ಸಾಲಿನ ಪ್ರವೇಶಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

NIFT 2020ರ ಪರೀಕ್ಷೆಗೆ ಅಕ್ಟೋಬರ್ 23 ರಿಂದ ಜನವರಿ 4,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನಿಫ್ಟ್ ಪ್ರವೇಶ ಪರೀಕ್ಷೆಯು ಇದೇ ಜನವರಿ 19,2020ರಂದು ನಡೆಯುತ್ತಿದ್ದು, ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯ ಅಧಿಕೃತ ವೆಬ್‌ಸೈಟ್ https://nift.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Admissions ಮೇಲೆ ಕ್ಲಿಕ್ ಮಾಡಿ ನಂತರ Admit Card Admission 2020 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಇ-ಮೇಲ್ ವಿಳಾಸ ನೀಡಿ ಸಬ್‌ಮಿಟ್ ಮಾಡಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











