
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಫ್ಯಾಷನ್ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಫ್ಯಾಷನ್ ಕ್ಷೇತ್ರಕ್ಕೆ ಎಂಟ್ರಿ ಕೊಡುವ ಆಸಕ್ತಿಯಿಂದ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 14 ರಂದು 32 ನಗರಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://nift.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಇ-ಮೇಲ್ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ


Click it and Unblock the Notifications











