NIFT Entrance Exam Result 2022 : ಫಲಿತಾಂಶ ವೀಕ್ಷಿಸುವುದು ಹೇಗೆ ?

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (NIFT) ಯುಜಿ, ಪಿಜಿ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಯು ವಿನ್ಯಾಸ ಪ್ರವೇಶ ಪರೀಕ್ಷೆ 2022 ಅನ್ನು ಫೆಬ್ರವರಿ 6 ರಂದು ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲಿಸಬಹುದು.

ನಿಫ್ಟ್ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

NIFT ಪ್ರವೇಶ ಪರೀಕ್ಷೆಯ ಫಲಿತಾಂಶ 2022 ವೀಕ್ಷಿಸುವುದು ಹೇಗೆ ? :

ಸ್ಟೆಪ್ 1 : ಅಧಿಕೃತ ವೆಬ್‌ಸೈಟ್‌ http://niftadmissions.in/ ಗೆ ಹೋಗಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಪ್ರವೇಶಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ಅಭ್ಯರ್ಥಿಗಳು ನಿಮ್ಮ ಕಾರ್ಯಕ್ರಮವನ್ನು ಆಯ್ಕೆಮಾಡಿ.
ಸ್ಟೆಪ್ 4 : ಅಭ್ಯರ್ಥಿಗಳು ನಿಮ್ಮ ರೋಲ್ ಸಂಖ್ಯೆ, ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
ಸ್ಟೆಪ್ 5 : ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ನಿಫ್ಟ್ ಫಲಿತಾಂಶ ನಂತರ ಮುಂದೇನು ? :

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಏಪ್ರಿಲ್ 2 ರಿಂದ 5, 2022 ರವರೆಗೆ ನಡೆಯುವ ಬ್ಯಾಚುಲರ್ ಆಫ್ ಡಿಸೈನ್ (B.Des) ಕಾರ್ಯಕ್ರಮದ ಪರಿಸ್ಥಿತಿ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.

ಹಾಗಾಗಿ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು niftadmissions.in ವೆಬ್‌ಸೈಟ್ಗೆ ಲಾಗಿನ್ ಆಗಿ ಮಾರ್ಚ್ 11 ರೊಳಗೆ ಆಯ್ಕೆಗಳನ್ನು ಭರ್ತಿ ಮಾಡಬೇಕಾಗುತ್ತದೆ. ಪ್ರವೇಶ ಪತ್ರಗಳು ಮಾರ್ಚ್ 16 ರಿಂದ ಡೌನ್‌ಲೋಡ್ ಮಾಡಲು ಲಭ್ಯವಿರುತ್ತದೆ.

NIFT ಯಾವ ಕಾರ್ಯಕ್ರಮಗಳನ್ನು ನೀಡುತ್ತದೆ? :

NIFT ಆರು ಬ್ಯಾಚುಲರ್ ಆಫ್ ಡಿಸೈನ್ (BDes) ಕಾರ್ಯಕ್ರಮಗಳನ್ನು ನೀಡುತ್ತದೆ ಅವುಗಳೆಂದರೆ ಪರಿಕರ ವಿನ್ಯಾಸ, ಫ್ಯಾಷನ್ ಸಂವಹನ, ಫ್ಯಾಷನ್ ವಿನ್ಯಾಸ, ನಿಟ್‌ವೇರ್ ವಿನ್ಯಾಸ, ಚರ್ಮದ ವಿನ್ಯಾಸ ಮತ್ತು ಜವಳಿ ವಿನ್ಯಾಸ. ಸಂಸ್ಥೆಯು ಬ್ಯಾಚುಲರ್ ಆಫ್ ಫ್ಯಾಶನ್ ಟೆಕ್ನಾಲಜಿ (BFTech) ಮತ್ತು ಮೂರು ಮಾಸ್ಟರ್ಸ್ ಕಾರ್ಯಕ್ರಮಗಳನ್ನು ಸಹ ನೀಡುತ್ತದೆ ಅವುಗಳೆಂದರೆ ಮಾಸ್ಟರ್ ಆಫ್ ಡಿಸೈನ್ (MDes), ಮಾಸ್ಟರ್ ಆಫ್ ಫ್ಯಾಶನ್ ಮ್ಯಾನೇಜ್ಮೆಂಟ್ (MFM), ಮತ್ತು ಮಾಸ್ಟರ್ ಆಫ್ ಫ್ಯಾಶನ್ ಟೆಕ್ನಾಲಜಿ (MFTech).

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NIFT released entrance exam results. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+