ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ನವೆಂಬರ್ 12 ರಿಂದ ಪ್ರಾರಂಭವಾಗಿ ಡಿಸೆಂಬರ್ 15,2021ರ ವರೆಗೆ ಆಫ್‌ಲೈನ್ ಮೂಲಕ ನಡೆಯಲಿವೆ. ಎನ್‌ಐಒಎಸ್ ಪಬ್ಲಿಕ್ ಪರೀಕ್ಷೆಗಳು ನವೆಂಬರ್ 11 ರಿಂದ ಪ್ರಾರಂಭವಾಗಲಿದೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
NIOS ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಎನ್‌ಐಒಎಸ್ ಅಧಿಕೃತ ವೆಬ್‌ಸೈಟ್ https://nios.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಎನ್‌ರೋಲ್ಮೆಂಟ್ ನಂಬರ್ ಅನ್ನು ನಮೂದಿಸಿ
ಸ್ಟೆಪ್ 4: ಪರೀಕ್ಷಾ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಪರೀಕ್ಷಾ ಶುಲ್ಕವನ್ನು ಪಾವತಿಸಿದ ವಿದ್ಯಾರ್ಥಿಗಳು ಮಾತ್ರ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡ ಬಳಿಕ ಅದರಲ್ಲಿ ನೀಡಲಾಗಿರುವ ಮಾರ್ಗಸೂಚಿಯನ್ನು ಓದಿಕೊಳ್ಳಿ. ಅಕ್ಟೋಬರ್ - ನವೆಂಬರ್ 2021 ರ ಸಾರ್ವಜನಿಕ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಏನಾದರು ತಪ್ಪುಗಳಿದ್ದಲ್ಲಿ ಅಥವಾ ನಿಮ್ಮ ಛಾಯಾಚಿತ್ರವು ಲಭ್ಯವಿಲ್ಲದಿದ್ದಲ್ಲಿ ದಯವಿಟ್ಟು ತಕ್ಷಣವೇ ನಿಮ್ಮ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸತಕ್ಕದ್ದು.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.