ನೀಟ್ 2018: ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೇ 6 ರಂದು ಪರೀಕ್ಷೆ ಸಾಧ್ಯತೆ

2018 ರ ನೀಟ್ ಪರೀಕ್ಷಾ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಅಲ್ಲದೆ ಮೇ 6 ರಂದು ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.

2018 ರ ನೀಟ್ ಪರೀಕ್ಷಾ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಅಲ್ಲದೆ ಮೇ 6 ರಂದು ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.

ಎಂಬಿಬಿಎಸ್, ಬಿಡಿಎಸ್, ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಕಡ್ಡಾಯಗೊಳಿಸಿರುವ " ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಈ ಹಿಂದೆ ಯಾವ ಪಠ್ಯಕ್ರಮವಿತ್ತೋ ಅದನ್ನೇ ಈ ವರ್ಷವೂ ಮುಂದುವರೆಸಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನೀಟ್ 2018

ಕೆಲದಿನಗಳ ಹಿಂದೆ ಎಚ್ಆರ್‌ಡಿ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ನೀಟ್ ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರ ಕುರಿತು ಮಾತನಾಡಿದ್ದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಿಬಿಎಸ್ಇ ಹಾಗೂ ಸ್ಟೇಟ್ ಸಿಲೆಬಸ್ ಕಲಿತ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಎಲ್ಲರಿಗೂ ಅನುಕೂಲವಾಗುಂತೆ 2018 ನೇ ಸಾಲಿನ ನೀಟ್ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವುದಾಗಿ ಹೇಳಿದ್ದರು.

ಆದರೆ ಪರೀಕ್ಷೆಗೆ ಕೇಲವೇ ತಿಂಗಳು ಬಾಕಿ ಇರುವಾಗ ಈಗ ಪಠ್ಯಕ್ರಮ ಬದಲಿಸಿದರೆ ಕಷ್ಟವಾಗುತ್ತದೆ ಎಂಬ ವಿದ್ಯಾರ್ಥಿಗಳ ಮತ್ತು ಪೋಷಕರ ಆಕ್ರೋಶದ ಹಿನ್ನೆಲೆಯಲ್ಲಿ ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಕೇಂದ್ರದ ಮೂಲಗಳು ಹೇಳಿವೆ.

ನೀಟ್ 2018

ಮೇ 6 ರಂದು ಪರೀಕ್ಷೆ

ಸಿಬಿಎಸ್ಇ ನೀಟ್ 2018 ರ ಪರೀಕ್ಷೆಯು ಮೇ 6 ರಂದು (ಭಾನುವಾರ) ನಡೆಯುವ ಸಾಧ್ಯತೆ ಇದೆ. ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ )ಯು ಈ ಪರೀಕ್ಷೆಯನ್ನು ಆಯೋಜಿಸಲಿದ್ದು ಈ ಬಾರಿ ದೇಶಾದ್ಯಂತ ಸುಮಾರು 10 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಕೂರುವ ಸಾಧ್ಯತೆ ಇದೆ.

ಪರೀಕ್ಷಾ ವಿವರ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕನ್ನಡ, ಇಂಗ್ಲಿಷ್, ತಮಿಳು, ತೆಲುಗು ಸೇರಿದಂತೆ ದೇಶದ ಒಟ್ಟು 10 ಭಾಷೆಗಳಲ್ಲಿ ನೀಡಲಾಗುತ್ತದೆ. ವಿದ್ಯಾರ್ಥಿಯು ಯಾವ ಭಾಷೆಯಲ್ಲಿ ಪರೀಕ್ಷೆ ಬರೆಯಲಿಚ್ಚಿಸುತ್ತಾನೆ ಎನ್ನುವುದನ್ನು ನೀಟ್ ಆನ್ಲೈನ್ ಅರ್ಜಿ ಸಲ್ಲಿಸುವಾಗ ಅರ್ಜಿಯಲ್ಲಿ ನಮೂದಿಸಬೇಕು.

ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು 3 ಬಾರಿ ಅವಕಾಶ ನೀಡಲಾಗಿದ್ದು ಈಗಾಗಲೇ 3 ಬಾರಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪತ್ರಿಕೆಯು ಒಟ್ಟು 180 ಪ್ರಶ್ನೆಗಳನ್ನು ಒಳಗೊಂಡಿರುತ್ತವೆ.

ಪರೀಕ್ಷಾ ವಿಷಯಗಳು

ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ (ಬಾಟನಿ ಮತ್ತು ಜಿಯೋಲಾಜಿ) ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳನ್ನ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ಕನ್ನಡಲ್ಲಿ ಪ್ರಶ್ನೆ ಪತ್ರಿಕೆ ಇರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Central Government has said there is no change in the 2018 Neat Test syllabus. The Central also said that the examination will be held on May 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+