Novel Coronavirus (COVID): ಪರೀಕ್ಷೆಗಳನ್ನು ಬೇಗ ಮುಗಿಸುವಂತೆ ಶಿಕ್ಷಣ ಇಲಾಖೆಯ ಸುತ್ತೋಲೆ

Novel Coronavirus (COVID) ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾರ್ವಜನಿಕರ ಆರೋಗ್ಯದ ಕಾಳಜಿ ಕುರಿತು ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಕೊರೊನಾ ಭೀತಿ: ಪರೀಕ್ಷೆಗಳು ಬೇಗ ಮುಗಿಯಲಿ ಎಂದ ಶಿಕ್ಷಣ ಇಲಾಖೆ

ಈ ವೈರಾಣು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವುದು ವರದಿಯಾಗುತ್ತಿದೆ. ಜೊತೆಗೆ ಈ ವೈರಾಣು ಹರಡುವ ವೇಗ ಮತ್ತು ವಿಧಾನ, ವಿಷಯದ ಗಂಭೀರತೆಯನ್ನು ಹೆಚ್ಚಿಸಿದೆ.

ಈ ರೋಗಾಣು ಶಾಲಾ ವಿದ್ಯಾರ್ಥಿಗಳಲ್ಲಿ ಪಸರಿಸುವುದನ್ನು ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಸುತ್ತೋಲೆಯಲ್ಲಿ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ.

ಕೊರೊನಾ ಭೀತಿ: ಪರೀಕ್ಷೆಗಳು ಬೇಗ ಮುಗಿಯಲಿ ಎಂದ ಶಿಕ್ಷಣ ಇಲಾಖೆ

ಮುನ್ನೆಚ್ಛರಿಕೆಯ ಕ್ರಮವಾಗಿ ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೂಚನೆಯ ಮೇರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲೆಗಳಲ್ಲಿನ ಪೂರ್ವ ಪ್ರಾಥಮಿಕ, ಎಲ್‌.ಕೆ.ಜಿ ಮತ್ತು ಯು.ಕೆ.ಜಿ ಶಾಲಾ ವಿದ್ಯಾರ್ಥಿಗಳಿಗೆ ದಿನಾಂಕ 9.3.2020 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಜೆಯನ್ನು ಘೋಷಿಸಲಾಗಿದೆ.

ದಿನಾಂಕ 9,2020ರಂದು ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭೆಯಲ್ಲಿ ರಾಜ್ಯದಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೊರೋನಾ ವೈರಸ್ ನಿಂದ ಉಂಟಾಗಬಹುದಾದ ಅಪಾಯದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಹಾಗೂ ಪರೀಕ್ಷಾ ದಿನಗಳು ಸಮೀಪಿಸುತ್ತಿರುವುದರಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅದರಂತೆ ರಾಜ್ಯಾದ್ಯಂತ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಆದಷ್ಟು ಬೇಗನೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಿ ಬೇಸಿಗೆ ರಜೆಯನ್ನು ಘೋಷಿಸಲು ಕ್ರಮ ವಹಿಸುವಂತೆ ಸಲಹೆ ನೀಡಿರುತ್ತಾರೆ.

ಈ ಹಿನ್ನೆಲೆಯಲ್ಲಿ 2019-20ನೇ ಸಾಲಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ಇಲ್ಲಿ ನೀಡಲಾಗಿರುವ ಕಾಲಮಿತಿಯೊಳಗೆ ನಡೆಸಲು ಸೂಚಿಸಿದೆ.

ಕೊರೊನಾ ಭೀತಿ: ಪರೀಕ್ಷೆಗಳು ಬೇಗ ಮುಗಿಯಲಿ ಎಂದ ಶಿಕ್ಷಣ ಇಲಾಖೆ

ಮೇಲಿನ ವೇಳಾಪಟ್ಟಿಯಂತೆ ವಾರ್ಷಿಕ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲು ಅಗತ್ಯ ಕ್ರಮ ವಹಿಸುವುದು.

ಸೂಚನೆ: ವಿದ್ಯಾರ್ಥಿಗಳು ಸುರಕ್ಷತಾ ಕ್ರಮವಾಗಿ ಮಾಸ್ಕ್ ಧರಿಸಿ ಪರೀಕ್ಷೆಯನ್ನು ಬರೆಯಲು ಇಚ್ಛಿಸಿದ್ದಲ್ಲಿ, ಅಂತಹ ವಿದ್ಯಾರ್ಥಿಗಳಿಗೆ ಅನುಮತಿಯನ್ನು ನೀಡಿದೆ.

ಸುತ್ತೋಲೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Due to corona fear department of education took some prevention measures.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X