ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್ಎಸ್ ಪಿ) 2017-18ನೇ ಸಾಲಿನ ವಿದ್ಯಾರ್ಥಿವೇತನ

Posted By:

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (NSP) ನಲ್ಲಿ 2017-18 ನೇ ಸಾಲಿನ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಮತ್ತು ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎನ್ಎಸ್ ಪಿ ವಿದ್ಯಾರ್ಥಿವೇತನ

ಅರ್ಜಿ ಸಲ್ಲಿಕೆ

  • ಯಾವುದಾದರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯುವುದು
  • ವಿದ್ಯಾರ್ಥಿಯ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಕ್ಕದ್ದು
  • ಅರ್ಜಿಗಳನ್ನು ಆನ್-ಲೈನ್ ಮೂಲಕವೇ scholarships.gov.in ವೆಬ್ಸೈಟ್ ನಲ್ಲಿ ಸಲ್ಲಿಸುವುದು.
  • 2017-18 ನೇ ಸಾಲಿನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವವರು ಮತ್ತು 2016-17ನೇ ಸಾಲಿನಲ್ಲಿ ಈಗಾಗಲೇ
  • NSP ಅಡಿಯಲ್ಲಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿರುವ ನವೀಕರಣ ವಿದ್ಯಾರ್ಥಿಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು

  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆದಾಯ ಪ್ರಮಾಣ ಪತ್ರ 5 ವರ್ಷ ಮೀರಿರಬಾರದು)
  • ವಿದ್ಯಾರ್ಥಿಯ ಕಳೆದ ವರ್ಷದ ಅಂಕಪಟ್ಟಿ ಮತ್ತು ಪ್ರಸಕ್ತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಅಪ್ಲೋಡ್ ಮಾಡುವುದು.
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ (ಆಧಾರ್ ಮತ್ತು ಮೊಬೈಲ್ ಸಂಖ್ಯೆ ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ).

ಸಂಬಂಧ ಪಟ್ಟ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ, ಸಂಬಂಧಪಟ್ಟ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಡೌನ್ಲೋಡ್ ಮಾಡಿದ ಅರ್ಜಿಯೊಂದಿಗೆ ಸಂಬಂಧಪಟ್ಟ ಶಾಲಾ/ಕಾಲೇಜುಗಳ ಮುಖ್ಯಸ್ಥರ ಮೂಲಕ ನಿಗದಿತ ಸಮಯದೊಳಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2017

English summary
CENTRALLY SPONSORED SCHEME OF PRE-MATRIC(IX & X) SCHOLARSHIP FOR SCHEDULED TRIBE STUDENTS-KARNATAKA
Please Wait while comments are loading...

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia