ಜೆಇಇ ಏಪ್ರಿಲ್ 2019 ಪೇಪರ್‌ 2(ಆರ್ಕಿಟೆಕ್ಚರ್) ರ ಫಲಿತಾಂಶ ನಾಳೆ ಪ್ರಕಟವಾಗಲಿದೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಜೆಇಇ ಏಪ್ರಿಲ್ ಪೇಪರ್ 2ರ ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಿದೆ. ಜೆಇಇ ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ಪರೀಕ್ಷಾ ಫಲಿತಾಂಶ ಪ್ರಕಟವಾದ ಕೂಡಲೇ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಜೆಇಇ (ಪೇಪರ್‌ 2)  ಪರೀಕ್ಷಾ ಫಲಿತಾಂಶ ನಾಳೆ ಪ್ರಕಟ

ಏಪ್ರಿಲ್ 8,2019 ರಂದು ನಡೆದ ಜೆಇಇ ಪರೀಕ್ಷೆಗೆ ಒಟ್ಟು 1.64 ಲಕ್ಷ ಅಭ್ಯರ್ಥಿಗಳು ಹಾಜರಾಜರಾಗಿದ್ದರು. ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ನಾಳೆ ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಜೆಇಇ ಪರೀಕ್ಷಾ 2019 ರ ಪೇಪರ್ 2ರ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ವಿದ್ಯಾರ್ಥಿಗಳು ಜೆಇಇ ಅಧಿಕೃತ ವೆಬ್‌ಸೈಟ್‌ https://jeemain.nic.in/webinfo/Public/Home.aspx ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಕಾಣಿಸುವ "JEE (Main Paper 2)April 2019 NTA Score" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ

ಸ್ಟೆಪ್ 4: ನಂತರ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ , ಡೌನ್‌ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

<strong>ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2019: ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ</strong>ಕರ್ನಾಟಕ ಕಾರಾಗೃಹ ಇಲಾಖೆ ನೇಮಕಾತಿ 2019: ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶವು ಏಪ್ರಿಲ್ 30,2019ರಂದು ಪ್ರಕಟವಾಗಿತ್ತು. ಈ ಪರೀಕ್ಷೆಯಲ್ಲಿ ಒಟ್ಟು 24 ಅಭ್ಯರ್ಥಿಗಳು ಪ್ರತಿಶತ ಸಂಪೂರ್ಣ 100 ಸ್ಕೋರ್ ಪಡೆದುಕೊಂಡಿದ್ದಾರೆ. ಈ ಪೈಕಿ 15 ಜನ ಜನವರಿ ಸೆಶನ್‌ನಿಂದ ಬಂದಿದ್ದು ಮತ್ತೆ 9 ಮಂದಿ ವಿದ್ಯಾರ್ಥಿಗಳು ಏಪ್ರಿಲ್‌ನಲ್ಲಿ ಪಡೆದ ಪರೀಕ್ಷೆಯಲ್ಲಿ ಪ್ರತಿಶತ 100 ಅಂಕಗಳನ್ನು ಪಡೆದಿರುತ್ತಾರೆ.

ಜೆಇಇ ಮುಖ್ಯ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಎನ್‌ಐಟಿ,ಐಐಟಿ,ಸಿಎಫ್‌ಟಿಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಹಾಗೂ ಆರ್ಕಿಟೆಕ್ಚರ್‌ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದಾಗಿದೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪ್ರವೇಶಕ್ಕಾಗಿ ಪ್ರವೇಶ ದ್ವಾರವಾಗಿರುವ ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಯ ಕಟ್‌ ಆಫ್ ಮಾರ್ಕ್ಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿರುತ್ತದೆ.

For Quick Alerts
ALLOW NOTIFICATIONS  
For Daily Alerts

English summary
NTA JEE main april exam paper 2 results 2019 will be declare by tomorrow in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X