NEET 2021 Answer Key : ನೀಟ್ ಯುಜಿ ಪರೀಕ್ಷೆಯ ತಾತ್ಕಾಲಿಕ ಕೀ-ಉತ್ತರ ಪ್ರಕಟ

ನ್ಯಾಷನಲ್ ಎಲಿಜಿಬಿಲಿಟಿ ಕಮ್‌ ಎಂಟ್ರ್ಯಾನ್ಸ್‌ ಟೆಸ್ಟ್‌ (ನೀಟ್) 2021ರ ತಾತ್ಕಾಲಿಕ ಸರಿಯುತ್ತರಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು.

ನೀಟ್ ಪರೀಕ್ಷೆಯ ತಾತ್ಕಾಲಿಕ ಕೀ-ಉತ್ತರ ರಿಲೀಸ್

ನೀಟ್ ಯುಜಿ ಪರೀಕ್ಷೆಯನ್ನು ಸೆಪ್ಟೆಂಬರ್ 12,2021 ರಂದು ದೇಶದಾದ್ಯಂತ ಮತ್ತು ಅಬ್ರಾಡ್ ಸೇರಿದಂತೆ 3858 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡುವುದರ ಜೊತೆಗೆ ಆಕ್ಷೇಪಣೆ ಸಲ್ಲಿಕೆಗೆ ಅರ್ಜಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 17,2021ರ ವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಪ್ರತಿ ಪ್ರಶ್ನೆಯ ಸರಿ ಉತ್ತರಕ್ಕೆ ಆಕ್ಷೇಪಣೆ ಸಲ್ಲಿಸಲು ಶುಲ್ಕ ರೂ.200/- ಅನ್ನು ಪಾವತಿಸಬೇಕಿರುತ್ತದೆ.

ಅಭ್ಯರ್ಥಿಗಳು ಪ್ರೊಸೆಸಿಂಗ್ ಶುಲ್ಕವನ್ನು ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್‌ ಬಳಸಿ ಅಥವಾ ನೆಟ್‌ ಬ್ಯಾಂಕಿಂಗ್ ಮೂಲಕ ಅಕ್ಟೋಬರ್ 17ರ ಸಂಜೆ 4 ಗಂಟೆಯೊಳಗೆ ಆನ್‌ಲೈನ್‌ ಮೂಲಕ ಪಾವತಿಸಬಹುದು. ಆಕ್ಷೇಪಣೆ ಸಲ್ಲಿಸಿದ ಸರಿಯುತ್ತರಕ್ಕೆ, ಅಭ್ಯರ್ಥಿಯ ಉತ್ತರ ಸರಿ ಇದ್ದಲ್ಲಿ ಪ್ರೊಸೆಸಿಂಗ್ ಶುಲ್ಕ ಮರುಪಾವತಿ ಮಾಡಲಾಗುತ್ತದೆ. ಆಕ್ಷೇಪಣೆ ಅರ್ಜಿಯನ್ನು ಪೋಸ್ಟ್‌ ಮೂಲಕವಾಗಲಿ, ಇ-ಮೇಲ್‌ ಮೂಲಕವಾಗಿ ಕಳುಹಿಸಿದಲ್ಲಿ ಪರಿಗಣಿಸಲಾಗುವುದಿಲ್ಲ. ಹಾಗೂ ಪ್ರೊಸೆಸಿಂಗ್ ಶುಲ್ಕ ಪಾವತಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಎನ್‌ಟಿಎ ವೆಬ್‌ ಸೈಟ್ https://ntaneet.nic.in/ntaneet/Welcome.aspx ನಲ್ಲಿ ನೀಡಲಾದ ನಿಯಮಗಳನ್ನು ಪಾಲಿಸುವ ಮೂಲಕ ಆಕ್ಷೇಪಣೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೀಟ್ ಯುಜಿ 2021 ಸರಿಯುತ್ತರಗಳನ್ನು ಚೆಕ್‌ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ neet.nta.nic.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ 'View and Challenge Answer Key, OMR and Record Response' ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಎಂಟರ್ ಮಾಡಿ.
ಸ್ಟೆಪ್ 4: ನಂತರ ತಾತ್ಕಾಲಿಕ ಸರಿಯುತ್ತರಗಳು ಸ್ಕ್ರೀನ್ ಮೇಲೆ ಮೂಡುತ್ತದೆ.
ಸ್ಟೆಪ್ 5: ಸರಿಯುತ್ತರಗಳನ್ನು ಚೆಕ್‌ ಮಾಡಿಕೊಂಡು ತದನಂತರ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released NEET UG answer key in official website. Raise objections before october 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+