ರಾಷ್ಟ್ರೀಯ ಪರೀಕ್ಷಾ ಸಂಸ್ಥೆ 'ಎನ್‌ಟಿಎ' ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್‌ಟಿಎ) ಸ್ಥಾಪಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಎನ್‌ಟಿಎ 2019ರಿಂದ ಕಾರ್ಯಾರಂಭ ಮಾಡಲಿದೆ ಎಂದು ಸಚಿವಾಲಯ ತಿಳಿಸಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ನಡೆಸುತ್ತಿದ್ದ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಪರೀಕ್ಷೆಗಳನ್ನು ಇನ್ನು ಮುಂದೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಲಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು (ಎನ್‌ಟಿಎ) ಸ್ಥಾಪಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಎನ್‌ಟಿಎ 2019ರಿಂದ ಕಾರ್ಯಾರಂಭ ಮಾಡಲಿದೆ ಎಂದು ಸಚಿವಾಲಯ ತಿಳಿಸಿದೆ.

ಎನ್‌ಟಿಎ  ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

'1860ರ ಸೊಸೈಟಿ ನೋಂದಣಿ ಕಾಯ್ದೆ ಅಡಿ ಎನ್‌ಟಿಎಯನ್ನು ಸ್ಥಾಪಿಸಲಾಗುತ್ತದೆ. ಸರ್ಕಾರ ಒಂದು ಬಾರಿಯ ಧನ ಸಹಾಯವಾಗಿ ಎನ್‌ಟಿಎಗೆ ₹ 25 ಕೋಟಿ ನೀಡಲಿದೆ. ಸಂಸ್ಥೆ ಸ್ವಾಯತ್ತವಾಗಿ ಕಾರ್ಯನಿರ್ವಹಿಸಲಿದೆ' ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ ಐಐಟಿಗಳ ಪ್ರವೇಶಕ್ಕೆ ನಡೆಸುವ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (ಜೆಇಇ) ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅನ್ನು ಕಳೆದ ಕೆಲವು ವರ್ಷಗಳಿಂದ ಕೇಂದ್ರ ಪ್ರೌಢ ಶಿಕ್ಷಣಾ ಮಂಡಳಿ (ಸಿಬಿಎಸ್‌ಇ) ಆಯೋಜಿಸುತ್ತಿದೆ. ತನ್ನ ಅಧೀನದಲ್ಲಿರುವ 18,000 ಶಾಲೆಗಳ ನಿರ್ವಹಣೆ-ಮೇಲ್ವಿಚಾರಣೆಗೆ ಅಡಚಣೆಯಾಗುತ್ತಿದೆ. ಹೀಗಾಗಿ ಈ ಪರೀಕ್ಷೆಗಳ ಹೊಣೆಯಿಂದ ಬಿಡುಗಡೆ ಮಾಡಬೇಕು ಎಂದುಕೇಂದ್ರ ಸರ್ಕಾರಕ್ಕೆ ಸಿಬಿಎಸ್‌ಇ ಮನವಿ ಸಲ್ಲಿಸಿತ್ತು.

'ಎನ್‌ಟಿಎ 2019ರಿಂದ ಕಾರ್ಯಾರಂಭ ಮಾಡಲಿದೆ. ಸಿಬಿಎಸ್‌ಇ ಆಯೋಜಿಸುತ್ತಿರುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳನ್ನು ಎನ್‌ಟಿಎ ನಡೆಸಲಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಡೆಸುವ ಪರೀಕ್ಷೆಗಳ ಜವಾಬ್ದಾರಿಯನ್ನೂ ನಂತರದ ದಿನಗಳಲ್ಲಿ ಎನ್‌ಟಿಎ ವಹಿಸಿಕೊಳ್ಳಲಿದೆ. ಪರೀಕ್ಷೆಗಳ ವಿಶ್ವಾಸಾರ್ಹತೆ ಮತ್ತು ಪರೀಕ್ಷಾ ಪ್ರಕ್ರಿಯೆನ್ನು ಸಂಸ್ಥೆ ಸುಧಾರಿಸಲಿದೆ' ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
The Union cabinet on Friday approved the establishment of an independent body to conduct high-profile entrance exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X