ನ್ಯಾಷನಲ್ ಏಜೆನ್ಸಿ (ಎನ್‌ಟಿಎ) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ ಯುಜಿಸಿ ನೆಟ್ 2019ರ ಪರೀಕ್ಷಾ ಪ್ರವೇಶ ಪತ್ರ ಇಂದು ಬಿಡುಗಡೆಯಾಗಲಿದೆ. ಯುಜಿಸಿ ನೆಟ್ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎನ್‌ಟಿಎ ನೆಟ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಎನ್‌ಟಿಎ ಯುಜಿಸಿ ನೆಟ್ 2019ರ ಪರೀಕ್ಷೆಯು ಅಸಿಸ್ಟೆಂಟ್ ಪ್ರೊಫೆಸರ್ ಅಥವಾ ಜ್ಯೂನಿಯರ್ ರೀಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ನಡೆಯಲಿದೆ. ಜೂನ್ 20 ರಿಂದ ಜೂನ್ 28, 2019ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎನ್‌ಟಿಎ ಯುಜಿಸಿ ನೆಟ್ ಪರೀಕ್ಷೆ ಜೂನ್ 2019ರ ಫಲಿತಾಂಶವು ಜುಲೈ 15, 2019 ರಂದು ಪ್ರಕಟಗೊಳ್ಳಲಿದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎನ್‌ಟಿಎ ಅಧಿಕೃತ ವೆಬ್‌ಸೈಟ್ https://ntanet.nic.in/ntanetcms/public/home.aspx# ಗೆ ಹೋಗಿ.
ಸ್ಟೆಪ್ 2: ನಂತರ "Download NET 2019 Admit Card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಮಯಕ್ಕೆ ಮುಂಚಿತವಾಗಿಯೇ ತಲುಪಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರು ಪಡಿಸಲಾಗುವುದು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳಬಹುದು.


Click it and Unblock the Notifications











