NTA UGC NET Admit Card : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ದಿ ನ್ಯಾಷನಲ್ ಟೆಟ್ಸಿಂಗ್ ಏಜೆನ್ಸಿಯು ಡಿಸೆಂಬರ್ 2020ರ ಮತ್ತು ಜೂನ್ 2021ರ ನೀಟ್ ಯುಜಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎನ್‌ಟಿಎ ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಪ್ರಕಟ

ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಭಾರಿ ಡಿಸೆಂಬರ್ 2020ರ ಮತ್ತು ಜೂನ್ 2021ರ ಎನ್‌ಇಟಿ ಪರೀಕ್ಷೆಗಳು ನವೆಂಬರ್ 2021ರ ನಡೆಯುತ್ತಿವೆ. ಈ ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಈಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು.

ಯುಜಿಸಿ ಎನ್‌ಇಟಿ ಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದೆ. ನವೆಂಬರ 20, 21, 22, 24, 25, 26, 29, 30 ಮತ್ತು ಡಿಸೆಂಬರ್ 1, 3, 4 ಮತ್ತು 5,2021ರಂದು ನೀಟ್ ಪರೀಕ್ಷೆ ನಡೆಯಲಿದೆ. 07 NET ವಿಷಯಗಳಿಗೆ ಪರೀಕ್ಷೆ ಅಂದರೆ: ಬೆಂಗಾಲಿ, ಕನ್ನಡ, ಗೃಹ ವಿಜ್ಞಾನ, ಹಿಂದಿ,
ಭೂಗೋಳಶಾಸ್ತ್ರ, ಸಮಾಜಶಾಸ್ತ್ರ ಮತ್ತು ಸಂಸ್ಕೃತವನ್ನು ಡಿಸೆಂಬರ್ 15-23,2021 ರ ನಡುವೆ ನಡೆಸಲಾಗುವುದು.

ಈ ಪರೀಕ್ಷಾ ವೇಳಾಪಟ್ಟಿಯನ್ನು ಎನ್‌ಟಿಎ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪಡೆಯಬಹುದಾಗಿದ್ದು, ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎನ್‌ಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ugcnet.nta.nic.in/webinfo/Page/Page?PageId=1&LangId=P
ಗೆ ಭೇಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ

ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5:ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಿದ್ದು, ಫೇಸ್‌ ಮಾಸ್ಕ್, ಹ್ಯಾಂಡ್‌ಸ್ಯಾನಿಟೈಸರ್ ಮತ್ತು ಫೇಸ್‌ಶೀಲ್ಡ್‌ ಬಳಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released UGC NET december 2020 and june 2021 exam admit card.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+