NTA UGC NET December 2019: ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಯುಜಿಸಿ ಎನ್‌ಇಟಿ 2019ರ ಡಿಸೆಂಬರ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಯುಜಿಸಿ ನೆಟ್ ಡಿಸೆಂಬರ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎನ್‌ಟಿಎ ನೆಟ್‌ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಎನ್‌ಟಿಎ ಯುಜಿಸಿ ನೆಟ್ ಡಿಸೆಂಬರ್ 2019: ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಎನ್‌ಟಿಎ ಯುಜಿಸಿ ನೆಟ್‌ 2019ರ ಡಿಸೆಂಬರ್ ನಲ್ಲಿ ನಡೆಯುವ ಪರೀಕ್ಷೆಯು ಅಸಿಸ್ಟೆಂಟ್‌ ಪ್ರೊಫೆಸರ್‌ ಅಥವಾ ಜ್ಯೂನಿಯರ್‌ ರೀಸರ್ಚ್‌ ಫೆಲೋಶಿಪ್‌ ಮತ್ತು ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗೆ ನಡೆಯಲಿದೆ. ಡಿಸೆಂಬರ್ 2 ರಿಂದ ಡಿಸೆಂಬರ್ 6, 2019ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎನ್‌ಟಿಎ ಯುಜಿಸಿ ನೆಟ್‌ 2019ರ ಡಿಸೆಂಬರ್ ಪರೀಕ್ಷೆಯ ಫಲಿತಾಂಶವು ಡಿಸೆಂಬರ್ 31, 2019ರಂದು ಪ್ರಕಟಗೊಳ್ಳಲಿದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ https://ntanet.nic.in/ntanetcms/public/home.aspx# ಗೆ ಹೋಗಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಮಯಕ್ಕೆ ಮುಂಚಿತವಾಗಿಯೇ ತಲುಪಿದ್ದಲ್ಲಿ ಮಾತ್ರ ಪರೀಕ್ಷೆಗೆ ಹಾಜರು ಪಡಿಸಲಾಗುವುದು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
NTA UGC NET December 2019 examination admit card released on official website. Here are the steps to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X