ಯುಜಿಸಿ ಎನ್ಇಟಿ 2020ರ ಜೂನ್ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಎನ್ಟಿಎ ಪ್ರಕಟ ಮಾಡಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್ಟಿಎ ಮಾರ್ಚ್ 16 ರಿಂದ ಏಪ್ರಿಲ್ 16,2020ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಆದರೆ ತದನಂತರದಲ್ಲಿ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೇ 16,2020ರ ವರೆಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಮತ್ತೊಮ್ಮೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಜಿ ಸಲ್ಲಿಸದಿರುವ ಅಭ್ಯರ್ಥಿಗಳು ಮೇ 31,2020ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್ಇಟಿ ಜೂನ್ 2020 ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು:
ಸ್ಟೆಪ್ 1: ಯುಜಿಸಿ ಎನ್ಇಟಿ ಅಧಿಕೃತ ವೆಬ್ಸೈಟ್ https://ugcnet.nta.nic.in/WebInfo/Public/View.aspx?page=1 ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ನಲ್ಲಿ ಲಭ್ಯವಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಕೆ ವಿಸ್ತರಣೆಯ ಪ್ರಕಟಣೆಯನ್ನು ಓದಲು ಇಚ್ಛಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











