UGC NET Notification 2022 : ಎನ್‌ಇಟಿ ಅಧಿಸೂಚನೆ ಮತ್ತು ಅರ್ಜಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭ

ಯುಜಿಸಿ ಎನ್‌ಇಟಿ 2022ರ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಎನ್‌ಟಿಎ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾತಿ ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ನೀಡುತ್ತಿರತಕ್ಕದ್ದು.

ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ 2021ರ ಮತ್ತು ಜೂನ್ 2022ರ ಪರೀಕ್ಷೆಗಳು ಒಟ್ಟಿಗೆ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಲಿದೆ ಎಂದು ಯುಜಿಸಿ ಅಧ್ಯಕ್ಷ ಮಾಮಿಡ್ಲ ಜಗದೀಶ್ ಕುಮಾರ್ ಹೇಳಿದ್ದಾರೆ. ಎನ್‌ಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೇಳಲಾಗುವ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಯುಜಿಸಿ ಎನ್‌ಇಟಿ 2022ರ ಅಧಿಸೂಚನೆ ಶೀಘ್ರದಲ್ಲಿ ಪ್ರಕಟ

ವಿದ್ಯಾರ್ಹತೆ :

ಯುಜಿಸಿ ಎನ್ಇಟಿ ಪರೀಕ್ಷೆ ತೆಗೆದುಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ಶೇ.55%ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಲ್ಲಿ ಪೂರೈಸಿರಬೇಕು. ಸ್ನಾತಕೋತ್ತರ ಪದವಿಯನ್ನು ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ :

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಗರಿಷ್ಟ 31 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ,ಓಬಿಸಿ,ಮಹಿಳಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಗೆ ಯಾವುದೇ ಗರಿಷ್ಟ ವಯೋಮಿತಿಯನ್ನು ನಿಗದಿಪಡಿಸಲಾಗಿರುವುದಿಲ್ಲ.

ಅರ್ಜಿ ಶುಲ್ಕದ ವಿವರ :

ಸಾಮಾನ್ಯ ಅಭ್ಯರ್ಥಿಗಳು 1000/-ರೂ, ಸಾಮಾನ್ಯ-ಆರ್ಥಿಕವಾಗಿ ಹಿಂದುಳಿದ/ಓಬಿಸಿ -ಎನ್‌ಸಿಎಲ್ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಯುಜಿಸಿ ಎನ್‌ಇಟಿ 2022ರ ಅಧಿಸೂಚನೆ ಶೀಘ್ರದಲ್ಲಿ ಪ್ರಕಟ

ಪರೀಕ್ಷೆಯ ವಿವರ :

ಪರೀಕ್ಷಾ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ
ಪರೀಕ್ಷೆಯ ಒಟ್ಟು ಅಂಕಗಳು : 300
ಪತ್ರಿಕೆ : 2 ಪ್ರಶ್ನೆ ಪತ್ರಿಕೆಗಳು
ಸಮಯ : ಒಟ್ಟು 3 ಗಂಟೆಗಳ ಅವಧಿ

ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್‌ಇಟಿ 2022 ಪರೀಕ್ಷೆಗೆ ಅರ್ಜಿ ಸಲ್ಲಿಸಿ :

ಸ್ಟೆಪ್ 1: ಯುಜಿಸಿ ಎನ್‌ಇಟಿ ಅಧಿಕೃತ ವೆಬ್‌ಸೈಟ್‌ https://ugcnet.nta.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ ಆನ್‌ಲೈನ್‌ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
NTA will release UGC NET 2022 notification and application form soon in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+