ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗಳನ್ನು ಸದ್ಯ ಸ್ಥಗಿತಗೊಳಿಸಿದೆ. ಇಲಾಖೆಯು ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಡಿಸೆಂಬರ್ 2019ರಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದ್ಯ ಸರ್ಕಾರದ ಆದೇಶಾನುಸಾರ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತದ ಮಾಹಿತಿಯನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಹುಬ್ಬಳ್ಳಿ ಕೇಂದ್ರ ಕಚೇರಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
For Quick Alerts
For Daily Alerts