ಎನ್‌ವೈಕೆಎಸ್‌ 225 ಡಿವೈಸಿ,ಎಸಿಟಿ ಮತ್ತು ಎಂಟಿಎಸ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ನೆಹರು ಯುವ ಕೇಂದ್ರ ಸಂಘಥನ್ ಡಿವೈಸಿ,ಎಸಿಟಿ ಮತ್ತು ಎಂಟಿಎಸ್ ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಮಾಡಲಾಗಿದೆ . ಎನ್‌ವೈಕೆಎಸ್‌ 225 ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ , ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 3,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆ ಆಯ್ಕೆ ಮಾಡಲಿದ್ದು ಇದೀಗ ಡಿವೈಸಿ / ಎಸಿಟಿ ಹುದ್ದೆಗಳಿಗೆ ಪ್ರವೇಶ ಪರೀಕ್ಷೆಯು ಏಪ್ರಿಲ್ 30,2019 ರಂದು ನಡೆಯಲಿದೆ ಮತ್ತು ಎಂಟಿಎಸ್ ಹುದ್ದೆಗಳಿಗೆ ಪ್ರವೇಶ ಪರೀಕ್ಷೆಯು ಮೇ 15,2019 ರಂದು ನಡೆಯಲಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಏಪ್ರಿಲ್ 17 ರಿಂದ ಮೇ 15,2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಎನ್‌ವೈಕೆಎಸ್‌ ಡಿವೈಸಿ,ಎಸಿಟಿ ಮತ್ತು ಎಂಟಿಎಸ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಎನ್‌ವೈಕೆಎಸ್‌ ಅಧಿಕೃತ ವೆಬ್ ಸೈಟ್ http://nyks.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Call Letters For DYC / ACT /MTS " ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Click here for Call Letters for DYC, ACT and MTS" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಈಗ ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರೋಲ್ ನಂ / ರಿಜಿಸ್ಟಾರ್ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NYKS has released the admit cards for DYC,ACT and MTS posts Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+