OIL India Limited Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀಯ ತೈಲ ನಿಗಮ ನೇಮಕಾತಿಯ ವಿವಿಧ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭರತೀಯ ತೈಲ ನಿಗಮ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಭಾರತೀಯ ತೈಲ ನಿಗಮದಲ್ಲಿ 535 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 24,2021 ರಿಂದ ಸೆಪ್ಟೆಂಬರ್ 23,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಭಾರತೀಯ ತೈಲ ನಿಗಮ ನೇಮಕಾತಿಯ ವಿವಿಧ ಹುದ್ದೆಗಳಿಗೆ 10 ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಭಾರತೀಯ ತೈಲ ನಿಗಮ ನೇಮಕಾತಿಯ ವಿವಿಧ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಭಾರತೀಯ ತೈಲ ನಿಗಮದ ಅಧಿಕೃತ ವೆಬ್‌ಸೈಟ್‌ https://www.oil-india.com/ ಗೆ ಭೇಟಿ ನೀಡಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Online Exam Call Letter For Various Posts" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಆನ್‌ಲೈನ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗತಕ್ಕದ್ದು. ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Oil india limited released online exam admit card 2022 for various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+