ರಾಜ್ಯದಲ್ಲಿ ಆನ್‌ಲೈನ್‌ ಶಿಕ್ಷಣ ಇಲ್ಲ: ಎಸ್‌. ಸುರೇಶ್‌ ಕುಮಾರ್ ಘೋಷಣೆ!

ಆನ್‌ಲೈನ್ ಶಿಕ್ಷಣ ರದ್ದು !

ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಮುಂದುವರಿಸಬೇಕೆ? ಅಥವಾ ಬೇಡವೇ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಬುಧವಾರ ಶಿಕ್ಷಣ ತಜ್ಞರ ಜೊತೆ ಸಭೆ ನಡೆಸಿದ ನಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು ಶಾಲೆಗಳು ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌ಗಳನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಆನ್‌ಲೈನ್ ತರಗತಿಗಳಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಹಾಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಆನ್‌ಲೈನ್‌ ಟೀಚಿಂಗ್‌ಗೆ ತೆಗೆದುಕೊಳ್ಳುತ್ತಿರುವ ಶುಲ್ಕವನ್ನು ಕೂಡ ಕೂಡಲೇ ನಿಲ್ಲಿಸಬೇಕು. ಕೊರೊನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಶಾಲೆಗಳು ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಆದರೆ, ಶುಲ್ಕವನ್ನು ಕಡಿತಗೊಳಿಸಲು ಅವಕಾಶವಿದೆ ಎಂದು ಹೇಳಿದ್ದಾರೆ.

ಲಾಕ್‌ಡೌನ್ ಬಳಿಕ ಹಲವಾರು ಶಾಲೆಗಳು ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದವು. ಖಾಸಗಿ ಶಾಲೆಗಳ ಈ ವರ್ತನೆಗೆ ಎಲ್ಲೆಡೆ ಪೋಷಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತಂತೆ ಶಿಕ್ಷಣ ಸಚಿವರು ರಾಜ್ಯದ ಎಲ್ಲ ಜಿಲ್ಲೆಗಳ ಶಿಕ್ಷಣ ಅಧಿಕಾರಿಗಳ ಜೊತೆ ಸಭೆ ನಡೆಸಿ, ಹಲವು ಹಂತದ ಚರ್ಚೆಗಳ ನಂತರ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಭಾರಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆದೇ ನಡೆಯುತ್ತದೆ. ಪರೀಕ್ಷೆಗೆ ಬೇಕಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಹಾಗೂ ವಿದ್ಯಾರ್ಥಿಗಳಿಗಾಗಿ 28 ಲಕ್ಷ ಮಾಸ್ಕ್‌ಗಳನ್ನು ಸಿದ್ದವಿಟ್ಟುಕೊಳ್ಳಲಾಗಿದ್ದು, ಪ್ರತಿ ಮಗುವಿಗೆ 2-3 ಮಾಸ್ಕ್‌ಗಳನ್ನು ವಿತರಿಸಲಾಗುವುದು. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಆರೋಗ್ಯ ತಪಾಸಣೆ ನಡೆಸಲಾಗುವುದು. ಆರೋಗ್ಯದಲ್ಲಿ ಯಾವುದೇ ಏರುಪೇರಿದ್ದರೆ ಆ ಮಗುವನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಸರಕಾರ ಮಾಡಲಿದೆ ಎಂದು ಎಸ್‌. ಸುರೇಶ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

For Quick Alerts
ALLOW NOTIFICATIONS  
For Daily Alerts

English summary
Online class for lkg, ukg and primary school students cancelled said by minister s. suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X