ನರ್ಸರಿ ಮಕ್ಕಳಿಗೆ ಆನ್‌ ಲೈನ್‌ ಶಿಕ್ಷಣ ನೀಡಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್

ಶಾಲೆಗಳು ಯಾವಾಗ ತೆರೆಯುತ್ತವೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ನರ್ಸರಿ ಮಕ್ಕಳಿಗೆ ಆನ್‌ಲೈನ್ ಕಲಿಕೆ ಇಲ್ಲ

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷ ಯಾವಾಗ ಆರಂಭಿಸಬೇಕು ? ಯಾವ ರೀತಿ ತರಗತಿಗಳನ್ನು ನಡೆಸಬೇಕು? ಶಾಲೆಯಲ್ಲಿ ಅಂತರ ಕಾಪಾಡುವ ದಿಸೆಯಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತಮ್ಮ ಮಕ್ಕಳನ್ನು ನರ್ಸರಿಗೆ ಕಳುಹಿಸಲು ಶೇ. 80ರಷ್ಟು ಪೋಷಕರು ಸಿದ್ಧರಿಲ್ಲ. ಇನ್ನೂ ಎರಡು ತಿಂಗಳ ಕಾಲವಕಾಶ ಕೇಳುತ್ತಿದ್ದಾರೆ ಎಂದು ಹೇಳಿದರು.

ಯುಕೆಜಿ ಮಕ್ಕಳಿಗೆ ಆನ್‌ಲೈನ್ ತರಬೇತಿ ನೀಡಲು ಕೆಲವೊಂದು ಶಿಕ್ಷಣ ಸಂಸ್ಥೆಗಳು ಈಗಾಗಲೇ ಸಜ್ಜಾಗಿದೆ. ಈ ಬಗ್ಗೆ ನಿಮಾನ್ಸ್ ತಜ್ಞರನ್ನು ಕೇಳಿದಾಗ 6 ವರ್ಷದೊಳಗಿನ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ಸೂಕ್ತವಲ್ಲ ಎಂದು ಸಲಹೆ ನೀಡಿದ್ದಾರೆ. ಈ ಬಗ್ಗೆ ನಿಮ್ಹಾನ್ಸ್ ವೈದ್ಯರಿಂದ ಸಂಪೂರ್ಣ ವರದಿ ಪಡೆಯಲಾಗಿದೆ. 6 ವರ್ಷದೊಳಗಿನ ಮಕ್ಕಳಿಗೆ ಆನ್‌ಲೈನ್ ತರಗತಿ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಶಾಲೆಯ ಆರಂಭದ ಬಗ್ಗೆ ಕೇಂದ್ರದ ಮಾರ್ಗಸೂಚಿ ಬಂದ ಬಳಿಕ ತರಗತಿ ಆರಂಭಿಸುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Online education for nursery students is difficult and when schools will reopen? we are also waiting for government instructions said by minister suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X