1st PUC Exam : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ: ಶಿಕ್ಷಣ ಇಲಾಖೆ

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪ್ರಮೋಟ್ ಮಾಡಲು 2 ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಭಾರಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಹಾಗೆಯೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದರು. ಆದರೂ ಸಹ ಇದೀಗ ಶಿಕ್ಷಣ ಇಲಾಖೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ.

ಆದರೆ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪ್ರೊಮೋಟ್ ಮಾಡಲು ಆನ್‌ಲೈನ್ ಪರೀಕ್ಷೆ ಕಡ್ಡಾಯ ಮತ್ತು ೨ ಪ್ರಶ್ನೆ ಪತ್ರಿಕೆಗೆ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಸೂಚನೆ ನೀಡಿರುವುದಾಗಿ ಸುತ್ತೋಲೆ ಹೊರಡಿಸಿದೆ.

ವಿದ್ಯಾರ್ಥಿಗಳಿಗೆ 2 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪಿಯು ಬೋರ್ಡ್ ರೂಪಿಸಿದೆ. ವಿದ್ಯಾರ್ಥಿಗಳು ಬೋರ್ಡ್ ನ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾದರಿ ಪ್ರಶ್ನೆಪತ್ರಿಕೆಗಳನ್ನು ಪಡೆದುಕೊಳ್ಳಬಹುದು.

ಆನ್‌ಲೈನ್ ಪರೀಕ್ಷೆ ಹೇಗೆ ?:

ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್‌ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕಿರುತ್ತದೆ. ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್‌ಲೋಡ್ ಮಾಡಲಾಗುತ್ತದೆ.

ಅಸಿಸ್ಮೆಂಟ್ ರೀತಿಯಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಕೈಗೊಂಡಿದೆ. ಮೊದಲ ಅಸಿಸ್ಮೆಂಟ್ ಗೆ ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಅದೇ ರೀತಿ ಎರಡನೇ ಅಸಿಸ್ಮೆಂಟ್ ಗೆ ಜೂನ್ 26 ಕೊನೆಯ ದಿನವಾಗಿದೆ. ಜುಲೈ 5ರೊಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.

ಫಲಿತಾಂಶ ಹೇಗೆ ನೀಡಲಾಗುವುದು ?:

ಉಪನ್ಯಾಸಕರು ಜುಲೈ 10ರೊಳಗೆ ಮೌಲ್ಯಮಾಪನ ಮಾಡಿರಬೇಕು. 2 ಪತ್ರಿಕೆಗಳ ಅಂಕವನ್ನು ಸಮೀಕರಣ ಮಾಡಿ ಜುಲೈ 15 ರೊಳಗೆ ಮುಗಿಸಿ, ಜುಲೈ 20ರೊಳಗೆ ಸ್ಯಾಟ್ಸ್ ನಲ್ಲಿ ಅಪ್ಲೋಡ್ ಮಾಡಿರಬೇಕು. ಎರಡೂ ಪರೀಕ್ಷೆಗಳ ಅಂಕವನ್ನು ಜುಲೈ 20ರೊಳಗೆ ಅಪ್ಲೋಡ್ ಮಾಡಲು ದಿನಾಂಕ ನಿಗಧಿಪಡಿಸಲಾಗಿದೆ.

ಮೌಲ್ಯಮಾಪನ ಹೇಗೆ ನಡೆಯಲಿದೆ ?:

ವಿದ್ಯಾರ್ಥಿಗಳಿಗೆ ಪ್ರತೀ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯವಾಗಿ ನೀಡಲಾಗುತ್ತದೆ. ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕವೆಂದು ನೀಡುತ್ತಾರೆ. ಪ್ರಯೋಗ ಸಹಿತ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಲಾಗುತ್ತದೆ. ಈ ಹಿಂದೆ ನಡೆಸಿದ ಪ್ರಾಯೋಗಿಕ ತರಗತಿಗಳ ಆಧಾರದ ಮೇಲೆ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ನಿಂದ ಸುತ್ತೋಲೆ ನೀಡಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka education department decided to conduct online exam for first puc students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+