Padma Awards 2022 : 2022ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ಭಾರತದದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗೃಹ ಸಚಿವಾಲಯ ಪ್ರಕಟಿಸಿದೆ. ಈ ವರ್ಷ 128 ಜನರಿಗೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಪದ್ಮ ಪ್ರಶಸ್ತಿ 2022 : ಒಟ್ಟು 128 ಸಾಧಕರಿಗೆ ಪದ್ಮ ಪ್ರಶಸ್ತಿ

ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಗಿದ್ದು, ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ. 2022ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ . ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

2022ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರಧಾನವನ್ನು ಮಾಡಿದ್ದಾರೆ. ಯಾರೆಲ್ಲಾ ಪದ್ಮ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ ಎನ್ನುವುದನ್ನು ಇಲ್ಲಿ ತಿಳಿಯೋಣ.

ಕಳೆದ ತಿಂಗಳು ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಭಾರತದ ಮೊದಲ ರಕ್ಷಣಾ ಸಿಬ್ಬಂದಿಯವರಿಗೆ ಮರಣೋತ್ತರವಾಗಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ.

ಲಸಿಕೆ ತಯಾರಕರು - ಸೀರಮ್ ಇನ್ಸ್ಟಿಟ್ಯೂಟ್‌ನ ಸೈರಸ್ ಪೂನಾವಲ್ಲ ಮತ್ತು ಭಾರತ್ ಬಯೋಟೆಕ್‌ನ ಕೃಷ್ಣ ಎಲ್ಲ ಮತ್ತು ಸುಚಿತ್ರಾ ಎಲ್ಲ ಅವರಿಗೆ ಪದ್ಮಭೂಷಣ, ಟೆಕ್ ದೈತ್ಯರಾದ ಮೈಕ್ರೋಸಾಫ್ಟ್ ಮತ್ತು ಗೂಗಲ್ ಮುಖ್ಯಸ್ಥರಾದ ಸತ್ಯ ನಾದೆಳ್ಳ ಮತ್ತು ಸುಂದರ್ ಪಿಚೈ ಅವರನ್ನು ಪದ್ಮಭೂಷಣ ನೀಡಿ ಗೌರವಿಸಲಾಗಿದೆ.

ಗಾಯಕ ಸೋನು ನಿಗಮ್ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕನ್ನಡಕವಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪುರಸ್ಕಾರ ದೊರೆತಿದೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಬಭೂಷಣ ಪುರಸ್ಕಾರ ಸಂದಿದೆ.

ಕರ್ನಾಟಕದ ಐವರಿಗೆ ಪದ್ಮ ಪ್ರಶಸ್ತಿ :

ಕರ್ನಾಟಕದ ಐವರಿಗೆ ಈ ಬಾರಿ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ಸೈನ್ಸ್ ಅಂಡ್ ಇಂಜನಿಯರಿಂಗ್ ಕ್ಷೇತ್ರದ ಸೇವೆಗಾಗಿ ಸುಬ್ಬಣ್ಣ ಅಯ್ಯಪನ್, ಕಲಾ ಕ್ಷೇತ್ರಕ್ಕೆ ಎಚ್.ಆರ್. ಕೇಶವಮೂರ್ತಿ, ನಾವಿನ್ಯತೆ ಕ್ಷೇತ್ರಕ್ಕೆ ಅಬ್ದುಲ್ ಖಾದರ್ ನಡಕಟ್ಟಿನ್, ಕೃಷಿ ಕ್ಷೇತ್ರದ ಸಾಧನೆಗಾಗಿ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮ ಪ್ರಶಸ್ತಿ ನೀಡಲಾಗಿದ್ದು, ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ.

2022ರ ಪದ್ಮ ಪ್ರಶಸ್ತಿ ಪುರಸ್ಕೃತ ಪಟ್ಟಿ :

For Quick Alerts
ALLOW NOTIFICATIONS  
For Daily Alerts

English summary
Padma Awards 2022: Here is the Complete list of Padma Vibhushan, Padma Bhushan, Padma Shri recipients in Kannada. Take a look.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X