Penalty Fee For Medical Students : ನೀಟ್ ವಿಳಂಬ ಹಿನ್ನೆಲೆ ಕೋರ್ಸ್ ಬದಲಿಸಿದ ವಿದ್ಯಾರ್ಥಿಗಳ ದಂಡ ಶುಲ್ಕ ರದ್ದು

ವೈದ್ಯಕೀಯ ಕೋರ್ಟ್ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದನ್ನು ಉನ್ನತ ಶಿಕ್ಷಣ ಸಚಿವರು ನೀಡಿದ್ದಾರೆ. ಈ ಬಾರಿಯ NEET ಪರೀಕ್ಷೆ ವಿಳಂಬವಾದ ಕಾರಣ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದುಪಡಿಸಲಾಗಿದೆ.

 
ಎಂಜಿನಿಯರಿಂಗ್ ಬಿಟ್ಟು ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದ್ದು ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಹೇಳಿದ್ದಾರೆ.

ಪ್ರತಿ ವರ್ಷವೂ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು ಆದರೆ ಪ್ರಸಕ್ತ ಸಾಲಿನಲ್ಲಿ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದ ಕಾರಣ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹಾಗಾಗಿ ಈಗಾಗಲೇ ಎಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಪಡೆದಿದ್ದರೆ ಪ್ರವೇಶಾತಿ ಮಾಡಿಕೊಳ್ಳಬಹುದು ಅದಕ್ಕೆ ಯಾವುದೇ ದಂಡ ಶುಲ್ಕವಿರುವುದಿಲ್ಲ, ಹಾಗೆಯೇ ಈಗಾಗಲೇ ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Due to the delay in neet exam, penalty fee for students who have already got engineering seat but now enrolling for medical seat has been cancelled.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X