PM Modi Announcement: ಪಿಎಂ ಕೇರ್ಸ್ ಅಡಿಯಲ್ಲಿ ಅನಾಥ ಮಕ್ಕಳಿಗೆ ನೆರವು

ಪಿಎಂ ಕೇರ್ಸ್ ಅಡಿಯಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಪಿಎಂ ಮೋದಿ

ಕೊರೋನಾ ಸೋಂಕಿನ ಕಾರಣದಿಂದಾಗಿ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಿಎಂ ಕೇರ್ಸ್ ಅಡಿಯಲ್ಲಿ ಅನಾಥ ಮಕ್ಕಳಿಗೆ ಅವರ ಭವಿಷ್ಯಕ್ಕೆ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, "ಕೊರೊನಾ ಸೋಂಕಿನಿಂದಾಗಿ ಪೋಷಕರನ್ನು ಕಳೆದುಕೊಂಡ ಎಲ್ಲ ಮಕ್ಕಳಿಗೆ ಸರ್ಕಾರ ಕಾಳಜಿ ವಹಿಸಲಿದೆ ಹಾಗೂ ಅವರ ಭವಿಷ್ಯಕ್ಕೆ ಜೊತೆಯಾಗಿ ನಿಲ್ಲಲಿದೆ. 'PM Cares For Children' ಯೋಜನೆಯಡಿಯಲ್ಲಿ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲಾಗುವುದು" ಎಂದು ಬರೆದಿದ್ದಾರೆ.

ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡು ಈಗ ಅನಾಥರಾಗಿರುವ ಮಕ್ಕಳಿಗೆ 18 ವರ್ಷ ತುಂಬಿದ ಬಳಿಕ ಮಾಸಿಕ ಸ್ಟೈಪೆಂಡ್ (Monthly Stipend) ಹಾಗೂ 23 ವರ್ಷ ತುಂಬಿದ ಬಳಿಕ ಪಿಎಂ ಕೆಯರ್ಸ್ ನಿಧಿಯಿಂದ 10 ಲಕ್ಷ ಫಂಡ್ ಸಿಗಲಿದೆ ಎಂದು ಹೇಳಿದ್ದಾರೆ.

ಪಿಎಂ ಕೇರ್ಸ್ ಅಡಿಯಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಪಿಎಂ ಮೋದಿ

ಈ ಕುರಿತು PMO ನೀಡಿರುವ ಮಾಹಿತಿಯ ಪ್ರಕಾರ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವುದಲ್ಲದೇ, ಉನ್ನತ ಶಿಕ್ಷಣವನ್ನು ಪಡೆಯುವ ಸಲುವಾಗಿ ಸಾಲವನ್ನು ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಪಿಎಂ ಕೆರಿಯರ್ಸ್ ಕಡೆಯಿಂದ ಸಾಲದ ಬಡ್ಡಿಯನ್ನು ಪಾವತಿಸುವುದಾಗಿ ತಿಳಿಸಿದೆ. ಇದಲ್ಲದೆ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಅಡಿಯಲ್ಲಿ 18 ವರ್ಷದವರೆಗಿನ ಮಕ್ಕಳಿಗೆ 5 ಲಕ್ಷ ರೂ.ಗಳ ವರೆಗೆ ಉಚಿತ ಆರೋಗ್ಯ ವಿಮಾ ಕೂಡ ಸಿಗಲಿದೆ ಹಾಗೂ ಪಿಎಂ ಕೆಯರ್ಸ್ ಫಂಡ್ ನಿಂದ ಅದರ ಪ್ರಿಮಿಯಂ ಅನ್ನು ಪಾವತಿಸಲಾಗುವುದು ಎನ್ನಲಾಗಿದೆ.

ಪಿಎಂ ಕೇರ್ಸ್ ಅಡಿಯಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಪಿಎಂ ಮೋದಿ

ಮಕ್ಕಳು ದೇಶದ ಭವಿಷ್ಯವನ್ನು ಪ್ರತಿನಿಧಿಸುವವರು ಮತ್ತು ಮಕ್ಕಳಿಗಾಗಿ ನಾವು ಎಲ್ಲಾ ರೀತಿಯ ಸಪೋರ್ಟ್ ಮತ್ತು ಕಾಳಜಿಯನ್ನು ವಹಿಸಲು ಸಿದ್ಧರಿದ್ದೇವೆ. ಮಕ್ಕಳ ಉತ್ತಮ ಭವಿಷ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನಿ ಮೋದಿ ನುಡಿದಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
PM modi announced free education to children who lost their parents due to covid. And few more announcements here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X