PNB Admit Card 2022 : ಮ್ಯಾನೇಜರ್ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 145 ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಸಿಎ, ಸಿಎಂಎ, ಐಸಿಡಬ್ಲ್ಯೂಎ, ಸಿಎಫ್ಎ, ಪದವಿ, ಪೋಸ್ಟ್ ಗ್ರಾಜುಯೇಶನ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 35 ರಿಂದ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 48,170/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಅದರ ಅನ್ವಯ ಆನ್‌ಲೈನ್ ಪರೀಕ್ಷೆಯನ್ನು ಜೂನ್ 12,2022ರಂದು ನಿಗದಿಪಡಿಸಲಾಗಿದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಹುದ್ದೆಗಳ ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ ?

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.pnbindia.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
PNB Admit card 2022 has been released, Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X