ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2017-18ನೇ ಸಾಲಿನ ವಿದ್ಯಾರ್ಥಿ ವೇತನ

ಮುಸ್ಲಿಂ, ಸಿಖ್, ಕ್ರೈಸ್ತ, ಬೌದ್ಧ ಮತ್ತು ಪಾರ್ಸಿ ವರ್ಗದ ವಿದ್ಯಾರ್ಥಿಗಳಿಗೆ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ಸ್ಮಾತಕೋತ್ತರ ಮತ್ತು ಟೆಕ್ನಿಕಲ್ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.

ಅಲ್ಪ ಸಂಖ್ಯಾತ ಸಮುದಾಯದ ಪ್ರಶಂಸನೀಯ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಯೋಜನೆಯಡಿ 2017-18ನೇ ಸಾಲಿನ ವಿದ್ಯಾರ್ಥಿ ವೇತನ ನೀಡಲು ಆನ್-ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಸ್ಲಿಂ, ಸಿಖ್, ಕ್ರೈಸ್ತ, ಬೌದ್ಧ ಮತ್ತು ಪಾರ್ಸಿ ವರ್ಗದ ವಿದ್ಯಾರ್ಥಿಗಳಿಗೆ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ಸ್ಮಾತಕೋತ್ತರ ಮತ್ತು ಟೆಕ್ನಿಕಲ್ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಹೊಂದಿರಬೇಕಾದ ಅರ್ಹತೆಗಳು

ಪ್ರಿ ಮೆಟ್ರಿಕ್ ವಿದ್ಯಾರ್ಥಿ ವೇತನ

  • ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು
  • ವಿದ್ಯಾರ್ಥಿಯ ವಾರ್ಷಿಕ ಆದಾಯವು ರೂ.1 ಲಕ್ಷ ಮೀರಿರಬಾರದು
  • ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಈ ವಿದ್ಯಾರ್ಥಿ ವೇತನವು ಒಂದು ಕುಟುಂಬದ ಇಬ್ಬರು ಮಕ್ಕಳಿಗೆ ಮಾತ್ರ ದೊರೆಯುತ್ತದೆ. ಒಂದು ವರ್ಷದಲ್ಲಿ ವಿದ್ಯಾರ್ಥಿ ವೇತನದ ಸಂಖ್ಯೆ ಸ್ಥಿರವಾಗಿ ಮತ್ತು ಸೀಮಿತವಾಗಿರುತ್ತದೆ. ಶೇ.30 ವಿದ್ಯಾರ್ಥಿ ವೇತನವನ್ನು ಹೆಣ್ಣು ಮಕ್ಕಳಿಗಾಗಿ ಮೀಸಲಿಟ್ಟಿದ್ದು, ಒಂದು ವೇಳೆ ಅರ್ಹ ವಿದ್ಯಾರ್ಥಿನಿಯರು ಇಲ್ಲದಿದ್ದಲ್ಲಿ ಗಂಡು ಮಕ್ಕಳಿಗೆ ನೀಡಲಾಗುವುದು.

ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ

ಮಾಧ್ಯಮಿಕ ಶಾಲೆ/ಕಾಲೇಜು/ವಿಶ್ವವಿದ್ಯಾಲಯ/ವಸತಿ ಸಂಸ್ಥೆಗಳು/ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 11 ಮತ್ತು 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ಹಾಗೂ ವೃತ್ತಿಪರ ಕೋರ್ಸುಗಳಾದ ಐಟಿಐ, ಟೆಕ್ನಿಕಲ್ ಕೋರ್ಸ್ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

  • ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು.
  • ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ರೂ.2.00 ಲಕ್ಷ ಮೀರಿರಬಾರದು.

ಮೆರಿಟ್ ಕಂ ಮೀನ್ಸ್ ಬೇಸ್ಟ್ ವಿದ್ಯಾರ್ಥಿ ವೇತನ

ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣ ಕೋರ್ಸುಗಳನ್ನು ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  • ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.2.50 ಲಕ್ಷ ಮೀರಿರಬಾರದು.
  • ವಿದ್ಯಾರ್ಥಿಯು ಆಧಾರ್ ಕಾರ್ಡ್ ಜೊತೆಗೆ ಒಂದು ವರ್ಷದೊಳಗೆ ಮಾಡಿಸಿರುವ ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ಪ್ರಮುಖ ದಿನಾಂಕಗಳು

ಪ್ರಿ-ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ: 30-09-2017
ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ: 31-10-2017
ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕೆ: 31-10-2017

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು scholarships.gov.in ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಯ ಹೊಸ 15 ಕಾರ್ಯಕ್ರಮಗಳನ್ನು ಜೂನ್ 2006 ರಂದು ಘೋಷಿಸಲಾಯಿತು. ಈ ವಿದ್ಯಾರ್ಥಿ ವೇತನವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ನೀಡಲಾಗುತ್ತಿದ್ದು, ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರಿಗಾಗುವ ಹಣಕಾಸಿನ ಹೊರೆಗಳನ್ನು ತಗ್ಗಿಸುತ್ತದೆ. ಮಕ್ಕಳ ವಿದ್ಯಾಭ್ಯಾಸ ಮತ್ತು ಶಿಕ್ಷಣವನ್ನು ಪೂರ್ಣಗೊಳಿಸಲು ಬೆಂಬಲಿಸುವ ಪ್ರಯತ್ನ ಇದಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Online applications are invited from minor community students for 2017-18 scholarship under pradhanmantri yojana.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X