ಖಾಸಗಿ ಶಾಲಾ ಶುಲ್ಕ ಹೆಚ್ಚಳ ಮಾಡುವಂತಿಲ್ಲ: ಸಚಿವ ಸುರೇಶ್ ಕುಮಾರ್ ಹೇಳಿಕೆ

ಈ ವರ್ಷ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲಾ ಶುಲ್ಕವನ್ನು ಹೆಚ್ಚಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ಜನರು ಸಂಕಷ್ಟದಿಂದಿದ್ದಾರೆ ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆಗಳು ಶುಲ್ಕವನ್ನು ಹೆಚ್ಚಿಸಬಾರದು ಮತ್ತು ಯಾವುದೇ ಶಿಕ್ಷಕರನ್ನು ಕೆಲಸದಿಂದ ತೆಗೆದು ಹಾಕಬಾರದು ಎಂದು ತಿಳಿಸಿದ್ದಾರೆ.

 

ಶಾಲಾ ಶುಲ್ಕವನ್ನು ಹೆಚ್ಚಳ ಮಾಡುವಂತಿಲ್ಲ: ಸಚಿವರ ಹೇಳಿಕೆ

ದೇಶದೆಲ್ಲೆಡೆ ಕೊರೋನಾ ಸಮಸ್ಯೆಯಿಂದಾಗಿ ಹಲವಾರು ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ, ಇನ್ನು ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ನಡುವೆಯೇ ಎಸ್‌ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯಲು ಆಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಮತ್ತು ಅವರನ್ನು ಫ್ರೆಶರ್ಸ್ ಎಂದು ಪರಿಗಣಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಶಿಕ್ಷಣದ ಕುರಿತು ಕೇಂದ್ರ ಸರ್ಕಾರವು ತಾತ್ಕಾಲಿಕ ಮಾರ್ಗಸೂಚಿ ಹೊರಡಿಸಿದ್ದು ಅದಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದರು. ಈ ಸಂದರ್ಭಧಲ್ಲಿ ಖಾಸಗಿ ಶಾಲಾ ಶಿಕ್ಷಕರ ಸಂಬಳದ ಕುರಿತು ಪ್ರತಿಕ್ರಿಯಿಸಿದ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ

For Quick Alerts
ALLOW NOTIFICATIONS  
For Daily Alerts

English summary
Private education institutions shouldn't increase school fees said by minister.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X