Engineering College Fees Hike : ಈ ಭಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇ.10ರಷ್ಟು ಶುಲ್ಕ ಹೆಚ್ಚಳ ಸಾಧ್ಯತೆ

ದೇಶದೆಲ್ಲೆಡೆ ಕೊರೋನಾ ವ್ಯಾಪಿಸಿದ ಬಳಿಕ ಅನೇಕ ಕ್ಷೇತ್ರಗಳ ಮೇಲೆ ಪೆಟ್ಟುಬಿದ್ದಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರದ ಮೇಲೂ ಹೆಚ್ಚು ಪರಿಣಾಮ ಬೀರಿದೆ. ಹೀಗಿರುವಾಗ ಪೋಷಕರು ಕೂಡ ತಮ್ಮ ಮಕ್ಕಳ ಶಿಕ್ಷಣ ವೆಚ್ಚವನ್ನು ಭರಿಸುವಲ್ಲಿ ಒದ್ದಾಡುವ ಪರಿಸ್ಥಿತಿ ಎದುರಾಗಿದೆ.

ಪ್ರಸಕ್ತ ಸಾಲಿನಲ್ಲಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಸಾಧ್ಯತೆ

ಕೋವಿಡ್ 3ನೇ ಅಲೆ ಭೀತಿಯ ನಡುವೆಯೂ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಒತ್ತಡಕ್ಕೆ ಮಣಿದು ಎಂಜಿನಿಯರಿಂಗ್‌ ಸೀಟುಗಳ ಶುಲ್ಕ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಸರ್ಕಾರಿ ಹಾಗೂ ಆಡಳಿತ ಮಂಡಳಿ ಕೋಟಾದ ಸೀಟುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಪ್ರಸಕ್ತ ಸಾಲಿನಲ್ಲಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಸಾಧ್ಯತೆ

ಸುಮಾರು ಮೂರು ವರ್ಷಗಳಿಂದ ಇಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿಲ್ಲ. ಈಗಿನ ಸಂದರ್ಭದಲ್ಲಿ ಸಿಬ್ಬಂದಿ ವೇತನ, ನಿರ್ವಹಣಾ ವೆಚ್ಚಗಳು ಅಧಿಕವಾಗಿದೆ. ಹಾಗಾಗಿ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂದು ಖಾಸಗಿ ಕಾಲೇಜುಗಳ ಮನವಿ ಮಾಡಿದ್ದು, ಶೇ 30ರಷ್ಟು ಶುಲ್ಕ ಹೆಚ್ಚಳ ಮಾಡಲು ಅವಕಾಶ ನೀಡಿ ಎಂದು ಕೋರಿದ್ದಾರೆ. ಆದರೆ ಉನ್ನತ ಶಿಕ್ಷಣ ಇಲಾಖೆ ಶೇ 5 ರಿಂದ 10ರಷ್ಟು ಶುಲ್ಕ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.

ಪ್ರಸ್ತುತ ಶುಲ್ಕದ ವಿವರ:

ಕೆಸಿಇಟಿ ಕೋಟಾದಡಿ - ರೂ.58,806- .ರಿಂದ 65,360 ವರೆಗೆ. ಕಾಮೆಡ್-ಕೆ ಕೋಟಾದಡಿ - ರೂ.1,43,748- 2,,01,960 ವರೆಗೆ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಶುಲ್ಕವಿದೆ.

ಸೀಟು ಹಂಚಿಕೆ ವಿವರ :

ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಕೆಸಿಇಟಿ ಪರೀಕ್ಷೆ ಕೋಟಾದಡಿ ಶೇಕಡ.45 ರಷ್ಟು, ಕಾಮೆಡ್‌-ಕೆ ಕೋಟಾದಡಿ ಶೇಕಡ.30, ಮ್ಯಾನೇಜ್ಮೆಂಟ್ ಮತ್ತು ಎನ್‌ಆರ್‌ಐ ಕೋಟಾದಡಿ ಶೇಕಡ. 25 ರಷ್ಟು ಸೀಟುಗಳು ಲಭ್ಯವಿದೆ.

ಸೆಪ್ಟೆಂಬರ್‌ನಲ್ಲಿ ಉನ್ನತ ಶಿಕ್ಷಣ ಸಚಿವರೊಂದಿಗೆ ಸಭೆ:

ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು "ಸೆಪ್ಟೆಂಬರ್ ತಿಂಗಳಿನಲ್ಲಿ ಖಾಸಗಿ ಕಾಲೇಜುಗಳ ಪ್ರತಿನಿಧಿಗಳ ಸಭೆಯನ್ನು ಕರೆದು ಈ ಕುರಿತು ಚರ್ಚೆ ನಡೆಸಲಾಗುತ್ತದೆ" ಎಂದಿದ್ದಾರೆ. ಸಭೆಯಲ್ಲಿ ಶೇ.10ರಷ್ಟು ಶುಲ್ಕ ಹೆಚ್ಚಿಸುವ ಸರ್ಕಾರದ ನಿರ್ಧಾರವನ್ನು ತಿಳಿಸಲಾಗುತ್ತದೆ. ಆದರೆ ಇದಕ್ಕೆ ಖಾಸಗಿ ಕಾಲೇಜುಗಳು ಸಹಮತ ನೀಡದಿದ್ದಲ್ಲಿ ಸರ್ಕಾರವು ತನ್ನ ನಿಲುವನ್ನು ತೆಗೆದುಕೊಳ್ಳಲಿದೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ ಹಾಗಾಗಿ ಶೆ.10ರಷ್ಟು ಮಾತ್ರ ಏರಿಕೆ ಮಾಡುವ ಸಾಧ್ಯತೆ ಇದೆ" ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

For Quick Alerts
ALLOW NOTIFICATIONS  
For Daily Alerts

English summary
Private engineering college demands govt to increase engineering college fees by 30 percent. Know more.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X